ನಾನೂ ಯಡಿಯೂರಪ್ಪ ಸಮನಾಗಿದ್ದೇನೆ : ಉಮೇಶ್ ಕತ್ತಿ

1 min read

ನಾನೂ ಯಡಿಯೂರಪ್ಪ ಸಮನಾಗಿದ್ದೇನೆ : ಉಮೇಶ್ ಕತ್ತಿ

ಬೆಂಗಳೂರು : ನಾನೂ ಯಡಿಯೂರಪ್ಪ ಸಮನಾಗಿದ್ದೇನೆ. ನನಗೆ ಇನ್ನೂ 15 ವರ್ಷ ಅವಕಾಶ ಇದೆ. ಯಾವತ್ತಾದರೂ ಒಂದು ಒಂದು ದಿನ ಮುಖ್ಯಮಂತ್ರಿಯಾಗುತ್ತೇನೆ ಎಂಬ ಭರವಸೆಯಿದೆ ಎಂದು ಸಚಿವ ಉಮೇಶ್ ಕತ್ತಿ ಮತ್ತೊಮ್ಮೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಎಂಟು ಬಾರಿ ಶಾಸಕನಾಗಿದ್ದೇನೆ. ನಾನೂ ಮುಖ್ಯಮಂತ್ರಿಯಾಗಿ ರಾಜ್ಯವಾಳಬೇಕೆಂಬ ಆಸೆಯಿದೆ.

ಯಾವತ್ತಾದರೂ ಒಂದು ಒಂದು ದಿನ ಮುಖ್ಯಮಂತ್ರಿಯಾಗುತ್ತೇನೆ ಎಂಬ ಭರವಸೆಯಿದೆ. ಆದ್ರೆ ನಾನು ಈಗ ಹೈಕಮಾಂಡ್ ಭೇಟಿಗೆ ಹೋಗುವುದಿಲ್ಲ.

Yeddyurappa saaksha tv

ಬಿಜೆಪಿಯಲ್ಲಿ 75 ವರ್ಷದ ಲಿಮಿಟ್ ಇದೆ. ಯಡಿಯೂರಪ್ಪ ಅವರಿಗೆ 80 ವರ್ಷ ಹತ್ತಿರವಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಅವರೂ ಬದ್ಧರಾಗಿತ್ತಾರೆ. ನಾವೂ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಉತ್ತರ ಕರ್ನಾಟಕದವರು ಸಿಎಂ ಆಗಬೇಕು ಅನ್ನೋ ವಿಚಾರವಾಗಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದವರೇ ಸಿಎಂ ಆಗಬೇಕು ಎನ್ನುವ ಬೇಡಿಕೆಯಿದೆ.

ಆ ಭಾಗದ ಯಾವುದೇ ಸಮುದಾಯದವರು ಸಿಎಂ ಆದರೂ ಸಹಕಾರ ನೀಡುತ್ತೇವೆ. ಯಾರನ್ನೇ ಸಿಎಂ ಮಾಡಿದರೂ ಸ್ವಾಗತವಿದೆ ಎಂದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd