ರಾಮನಗರ: ಮತದಾರರ ತೀರ್ಮಾನಕ್ಕೆ ನಾನು ತಲೆ ಬಾಗುತ್ತೇನೆ ಎಂದು ಎನ್ ಡಿಎ ಅಭ್ಯರ್ಥಿ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಸೋಲಿನ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕೊನೆಯ ಸಮಯದಲ್ಲಿ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾದೆ. ನಾನು ಸೋತಿದ್ದೇನೆಂದು ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ. ನಿಮ್ಮ ಋಣ ತೀರಿಸುವ ಕಾರ್ಯ ಮಾಡುತ್ತೇನೆ. ಯಾವು ಕಾರಣಕ್ಕೂ ರಾಜಕೀಯದಿಂದ ಹಿಂದೆ ಸರಿಯುವುದಿಲ್ಲ. ನಾನು ಈ ಜಿಲ್ಲೆಯ ಮಗ. ನನಗೆ ಈ ಜಿಲ್ಲೆಯೊಂದಿಗೆ ಭಾವನಾತ್ಮಕ ಸಂಬಂಧವಿದೆ ಎಂದು ಹೇಳಿದ್ದಾರೆ.
ಚುನಾವಣೆಯ ಫಲಿತಾಂಶ ಎಲ್ಲರಿಗೂ ಆಘಾತ ತಂದಿದೆ. ಕಳೆದ 18 ದಿನದಲ್ಲಿ ಪ್ರತಿ ಹಳ್ಳಿಯಲ್ಲೂ ಎಲ್ಲರೂ ನನಗೆ ಪ್ರೀತಿ, ವಾತ್ಸಲ್ಯ ತೋರಿಸಿದ್ದಾರೆ. ಸುಮಾರು 87 ಸಾವಿರ ಮತ ಬಂದಿದೆ. ಪ್ರಜಾಪ್ರಭುತ್ವದಲ್ಲಿ ತೀರ್ಮಾನ, ತೀರ್ಪು ತೆಗೆದುಕೊಳ್ಳುವ ಹಕ್ಕು ಇರುವುದು ಜನರಿಗೆ, ಮತದಾರರಿಗೆ. ಹೀಗಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ಕಾರ್ಯಕರ್ತರು ಪ್ರಮಾಣಿಕವಾಗಿ ದುಡಿದಿದ್ದಾರೆ. ಯಸ್ಸು ಚಿಕ್ಕದಿದೆ ಎಲ್ಲವನ್ನೂ ಸಮಚಿತ್ತದಿಂದ ತಗೆದುಕೊಂಡಿದ್ದೇನೆ. ರಾಜ್ಯದ ನಿಷ್ಠಾವಂತ ಕಾರ್ಯಕರ್ತರೆಲ್ಲರಿಗೂ ಧ್ವನಿಯಾಗಿ ಇರುತ್ತೇನೆ ಎಂದು ಹೇಳಿದ್ದಾರೆ.






