ಕಳೆದ ಹಲವು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನನಗೆ ರಾಜ್ಯಸಭಾ ಸದಸ್ಯರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಹೈಕಮಾಂಡ್ ಗೆ ಶಿಫಾರಸ್ಸು ಮಾಡಿತ್ತು.
ಆದರೆ ಹೈಕಮಾಂಡ್ ಪಕ್ಷದ ಸಂಘಟನೆ ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿ ಪಕ್ಷದ ಇಬ್ಬರು ಹಿರಿಯ ಕಾರ್ಯಕರ್ತರನ್ನು ಆಯ್ಕೆ ಮಾಡಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ನಾನು ಈ ನಿರ್ಧಾರವನ್ನು ಅತ್ಯಂತ ಗೌರವದಿಂದ ಸ್ವಾಗತಿಸಿದ್ದೇನೆ. ಪಕ್ಷದ ನಿರ್ಧಾರದ ಬಗ್ಗೆ ಯಾರೂ ಯಾವುದೇ ರೀತಿಯ ಬೇಸರ ವ್ಯಕ್ತಪಡಿಸಬೇಡಿ.
ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುವ ಸಾರ್ವಕಾಲಿಕ ಸತ್ಯವನ್ನು ಒಪ್ಪಿಕೊಂಡವನು ನಾನು. ಕಳೆದ ಹಲವು ವರ್ಷಗಳಲ್ಲಿ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ ನನ್ನನ್ನು ಗುರುತಿಸಿ ಆಯ್ಕೆ ಪಟ್ಟಿಯಲ್ಲಿ ನನ್ನ ಹೆಸರನ್ನು ಸೂಚಿಸಿದ ಪಕ್ಷದ ಎಲ್ಲ ಮುಖಂಡರರಿಗೆ ನಾನು ಅಭಾರಿಯಾಗಿದ್ದೇನೆ. ಈ ಬೆಳವಣಿಗೆಯ ದಿನಗಳಲ್ಲಿ ನನ್ನ ಮೇಲೆ ಪ್ರೀತಿ, ವಿಶ್ವಾಸ ಇರಿಸಿ ಹರಸಿ ಹಾರೈಸಿದ ಸ್ನೇಹಿತರಿಗೆ, ಅಭಿಮಾನಿಗಳಿಗೆ ಹಾಗೂ ಕುಟುಂಬಸ್ಥರಿಗೆ ನನ್ನ ಕ್ರತಜ್ಞತೆಗಳು.
ನಿಮ್ಮ ಪ್ರೀತಿಯ
ಕೆ. ಪ್ರಕಾಶ್ ಶೆಟ್ಟಿ ( ಬಂಜಾರ)