ನಾನು ಕೆಆರ್‍ಎಸ್ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ : ಸುಮಲತಾ ಅಚ್ಚರಿ ಹೇಳಿಕೆ
ಮೈಸೂರು : ನಾನು ಕೆಆರ್‍ಎಸ್ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ. ಬಿರುಕು ಬಿಟ್ಟಿದಿಯಾ ಅಂತ ಸಭೆಯಲ್ಲಿ ಕೇಳಿದ್ದೇನೆ ಎಂದು ಸಂಸದೆ ಸುಮಲತಾ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಆರ್‍ಎಸ್ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ. ಬಿರುಕು ಬಿಟ್ಟಿದಿಯಾ ಅಂತ ಸಭೆಯಲ್ಲಿ ಕೇಳಿದ್ದೇನೆ. ಕೆ.ಆರ್.ಎಸ್ ಬಿರುಕು ಬಿಡುತ್ತದೆ ಎಂಬ ಆತಂಕ ಇದೆ ಅಷ್ಟೇ. ಬಿಕುರು ಬಿಡುವ ಆತಂಕ ಶೇಕಡ 500ರಷ್ಟು ಆತಂಕ ಇದೆ. ನಾನು ಈ ಆತಂಕವನ್ನು ದಿಶಾ ಸಭೆಯಲ್ಲಿ ವ್ಯಕ್ತಪಡಿಸಿದ್ದೇನೆ. ಆದರೆ ಅದನ್ನೇ ಹೊರಗೆ ಬೇರೆ ರೀತಿಯಲ್ಲಿ ಅರ್ಥೈಸಿ ಇಷ್ಟೆಲ್ಲ ಮಾಡಿದ್ದಾರೆ ಎಂದು ದಳಪತಿಗಳ ವಿರುದ್ಧ ಕಿಡಿಕಾರಿದರು.
ಇನ್ನು ಮಂಡ್ಯ ಜಿಲ್ಲೆಯ ಗಣಿ ಅಧಿಕಾರಿಗಳು ಕೂಡ ಏನೂ ಆಗಿಲ್ಲ ಎನ್ನುವಂತೆ ಮಾತನಾಡುತ್ತಾರೆ. ಅವರ ಮೇಲೆಯೂ ಒತ್ತಡಗಳು ಇರಬಹುದು. ಈಗಾಗಿ ಅಕ್ರಮ ಗಣಿಗಾರಿಕೆ ಬಗ್ಗೆ ಸ್ವತಂತ್ರ ತನಿಯಾಗಬೇಕು. ರಾಜ್ಯದ ಅಧಿಕಾರಿಗಳಿಂದ ಸಾಧ್ಯವಾಗದಿದ್ದರೆ ಸಿಬಿಐ ತನಿಖೆ ಮಾಡಿಸಲಿ. ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ 1200ಕೋಟಿ ನಷ್ಟ ಆಗಿದೆ. ಇಷ್ಟು ರಾಜಧನ ವಸೂಲಿ ಮಾಡಿದ್ರೆ ಮಂಡ್ಯ ಅಭಿವೃದ್ಧಿಗೆ ಬಳಸಬಹುದಿತ್ತು. ಈಗ ಗಣಿ ಅಧಿಕಾರಿಗಳಯ ಡ್ರೋಣ್ ಸರ್ವೆಗೂ ಹಣ ಇಲ್ಲ ಎನ್ನುತ್ತಿದ್ದಾರೆ. ನಾನು ಗಣಿ ಸಚಿವ ಮುರುಗೇಶ್ ನಿರಾಣಿಗೆ ಎಲ್ಲವನ್ನು ಹೇಳಿದ್ದೇನೆ. ಮೊದಲು ಅವರನ್ನು ಭೇಟಿ ಬೆಟ್ಟ ಸುತ್ತಮುತ್ತಲಿನ ಗಣಿಗಾರಿಕೆ ಪ್ರದೇಶಕ್ಕೆ ಕರೆದುಕೊಂಡು ಬರುವೆ. ನಂತರ ವಸ್ತು ಸ್ಥಿಗತಿ ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ತಿಳಿಸುವೆ ಎಂದು ಹೇಳಿದ್ದಾರೆ.
ಇನ್ನು 50 ವರ್ಷ ಬಿಟ್ಟು ಕೆಆರ್‍ಎಸ್ ಹೊಡೆದು ಹೋದ್ರೆ ಪರವಾಗಿಲ್ವ ಎಂದು ಪ್ರಶ್ನಿಸಿದ ಸುಮಲತಾ, ಕೆಆರ್‍ಎಸ್ ಸುತ್ತಮುತ್ತ ಆತಂಕದ ವಾತಾವರಣ ಇರುವ ಬಗ್ಗೆ ಎಲ್ಲಿಡೆ ವರದಿ ಆಗುತ್ತಿದೆ. ಈಗಾಗಲೇ ನಾನು ಕೂಡ ಸಭೆಯಲ್ಲಿ ಬಿರುಕಾಗಿದೆಯಾ ಅಂತ ಪ್ರಶ್ನೆ ಮಾಡಿದೆ. ಈಗ ಏನೂ ಆಗಿಲ್ಲ ಅಂದ್ರೆ ಸರಿ. ಆಗಂತ ಇನ್ನು 10 ವರ್ಷ ಬಿಟ್ಟು ಕೆಆರ್‍ಎಸ್ ಡ್ಯಾಂ ಹೊಡೆದರೆ ನಿನಗೆ ಪರವಾಗಿಲ್ವ. 50 ವರ್ಷ ಬಿಟ್ಟು ಹೊಡೆದರೆ ಓಕೆನಾ..? ಕೊರೊನಾ ಬರುವ ಮುಂದೆ ಮಾಸ್ಕ್ ಹಾಕೊಳಿ, ಸ್ಯಾನಿಟೈಸ್ ಮಾಡ್ಕೊಳಿ ಅಂತ ಹೇಳ್ತಿವಿ. ಆಗಂತ ನಮಗೆ ಕೊರೊನಾ ಬಂದಿದೆ ಅಂತ ತಿಳಿದುಕೊಳ್ಳೊಕ್ಕಾಗುತ್ತಾ ಎಂದರು.
ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಹೇಳಿದ ಸುಮಲತಾ, ನಾನು ಎಕ್ಸ್‌ಪೋಸ್ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ಕೆಆರ್‍ಎಸ್ ಡ್ಯಾಂ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಬ್ಲಾಸ್ಟಿಂಗ್ ಮಾಡುವಂತಿಲ್ಲ. ಈ ಪ್ರದೇಶದಲ್ಲಿ ಅಕ್ರಮ, ಸಕ್ರಮ ಅನ್ನುವ ಪ್ರಶ್ನೆಯೇ ಬರೋದಿಲ್ಲ. ಗಣಿಗಾರಿಕೆಯಿಂದಾಗಿ ಕೆಆರ್‍ಎಸ್ ಡ್ಯಾಂನಲ್ಲಿ ಕಂಪನ ದಾಖಲಾಗಿದೆ. ಈ ಸಂಬಂಧ ಅಧಿಕೃತ ದಾಖಲೆಗಳೂ ಇವೆ. ಆದ್ದರಿಂದ ಗಣಿಗಾರಿಕೆ ನಿಲ್ಲಬೇಕು ಅಂತ ಹೋರಾಟ ಮಾಡುತ್ತಿದ್ದೇನೆ. ಸರ್ಕಾರವನ್ನಾಗಲೀ, ಮತ್ಯಾರನ್ನೋ ಆಗಲಿ ಚಾರ್ಜ್ ಮಾಡೋದು ನನ್ನ ಉದ್ದೇಶ ಅಲ್ಲ. ವಿರೋಧ ಪಕ್ಷದವರನ್ನೂ ಎಳೆತಂದು ಇದಕ್ಕೆ ರಾಜಕೀಯ ರೂಪ ಕೊಡೋದಕ್ಕೂ ನಾನು ಬಯಸಲ್ಲ. ಆದರೆ ಅಕ್ರಮದ ಬಗ್ಗೆ ಹೋರಾಡುವ ಮನಸ್ಥಿತಿ ಇರುವ ಎಲ್ಲರ ಸಹಕಾರ ಕೇಳುತ್ತೇನೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸುವವರೆಗೂ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.