ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾನು ನಿರೀಕ್ಷಿಸಿರಲಿಲ್ಲ… ಕಟ್ಟ ಕಡೆಯ ಪಂದ್ಯದ ಕೊನೆಯ ಘಳಿಗೆಯಲ್ಲೂ ನಾಯಕನಾಗಿದ್ದೆ… ಇದು ಧೋನಿಯ ಅಚ್ಚರಿಯ ಕೊಡುಗೆ..!

admin by admin
July 11, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ನಾನು ನಿರೀಕ್ಷಿಸಿರಲಿಲ್ಲ… ಕಟ್ಟ ಕಡೆಯ ಪಂದ್ಯದ ಕೊನೆಯ ಘಳಿಗೆಯಲ್ಲೂ ನಾಯಕನಾಗಿದ್ದೆ… ಇದು ಧೋನಿಯ ಅಚ್ಚರಿಯ ಕೊಡುಗೆ..!

ಮಯಾಂಕ್ ಅಗರ್‍ವಾಲ್ ಜೊತೆಗಿನ ಲೈವ್ ಕಾರ್ಯಕ್ರಮದಲ್ಲಿ ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಸಿಕ್ಕಾಪಟ್ಟೆ ಮಾತನಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೌರವ್ ಗಂಗೂಲಿ ಹಲವಾರು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಟೀಮ್ ಇಂಡಿಯಾವನ್ನು ಕಟ್ಟಿ ಬೆಳೆಸಿರುವುದರಿಂದ ಹಿಡಿದು ತನ್ನನ್ನು ನಾಯಕತ್ವದಿಂದ ಕೆಳಗಿಳಿಸಲು ಏನೆಲ್ಲಾ ಪ್ಲಾನ್ ಮಾಡಿದ್ರೂ ಎಂಬುದನ್ನು ಸಹ ಹೇಳಿಕೊಂಡಿದ್ದಾರೆ. ಇದೀಗ ತನ್ನ ವಿದಾಯದ ಪಂದ್ಯವನ್ನು ನೆನಪು ಮಾಡಿಕೊಂಡಿದ್ದಾರೆ.
ಅದು ನವೆಂಬರ್ 2008. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ. ನಾಗ್ಪುರದಲ್ಲಿ ನಡೆದಿದ್ದ ಪಂದ್ಯವದ್ದು. ಅಂದ ಹಾಗೇ ಇದು ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಕ್ರಿಕೆಟ್ ಬದುಕಿನ ವಿದಾಯದ ಪಂದ್ಯವಾಗಿತ್ತು. ಹೀಗಾಗಿ ಈ ಪಂದ್ಯ ಹೆಚ್ಚಿನ ವಿಶೇಷತೆಯನ್ನು ಪಡೆದುಕೊಂಡಿತ್ತು. ಅಲ್ಲದೆ ಗಂಗೂಲಿ ಪಂದ್ಯಕ್ಕಿಂತ ಮುನ್ನವೇ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ಅಂತನೂ ಹೇಳಿದ್ದರು.
ಅಂದ ಹಾಗೇ ಅದು ಪಂದ್ಯದ ಕೊನೆಯ ದಿನ. ಭೋಜನ ವಿರಾಮದ ವೇಳೆ ಆಸ್ಟ್ರೇಲಿಯಾ ತನ್ನ ಪ್ರಮುಖ ಮೂರು ವಿಕೆಟ್‍ಗಳನ್ನು ಕಳೆದುಕೊಂಡಿತ್ತು. ಆಸ್ಟ್ರೇಲಿಯಾಗೆ ಗೆಲ್ಲಲು ಇನ್ನೂ 271 ರನ್‍ಗಳು ಬೇಕಿದ್ದವು. ವಿರಾಮದ ನಂತರ ಗಂಗೂಲಿ ಸೇರಿದಂತೆ ಟೀಮ್ ಇಂಡಿಯಾ ಆಟಗಾರರು ಮೈದಾನಕ್ಕಿಳಿದಿದ್ದರು. ಆಗ ಟೀಮ್ ಇಂಡಿಯಾ ಆಟಗಾರರು ಗಂಗೂಲಿಗೆ ಗೌರವ ಸಲ್ಲಿಸಿದ್ದರು. ಆ ನಂತರ ಮೈದಾನದಲ್ಲಿ ಗಂಗೂಲಿಗೆ ನಾಯಕ ಮಹೇಂದ್ರ ಸಿಂಗ್ ಧೋನಿ ಅಚ್ಚರಿಯ ಗಿಫ್ಟ್ ನೀಡಿದ್ದರು. ಅದು ಏನು ಅಂದ್ರೆ…
ಅದು ಪಂದ್ಯದ ಕೊನೆಯ ಹಂತ. ನನಗೆ ಅಚ್ಚರಿಯೊಂದು ಕಾದಿತ್ತು. ಹಾಗಂತ ಅದನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಆಗ ಟೀಮ್ ಇಂಡಿಯಾದ ನಾಯಕನಾಗಿದ್ದ ಮಹೇಂದ್ರ ಸಿಂಗ್ ಅವರು ನನ್ನ ಕೈಗೆ ಮೈದಾನದಲ್ಲಿ ನಾಯಕತ್ವದ ಜವಾಬ್ದಾರಿಯನ್ನು ನೀಡಿದ್ದರು. ನನಗೆ ಇದು ಆಶ್ಚರ್ಯವನ್ನುಂಟು ಮಾಡಿತ್ತು. ಆದ್ರೆ ಇದು ಎಮ್.ಎಸ್. ಧೋನಿಯ ಸ್ಪೇಷಾಲಿಟಿ. ನಾಯಕನಾಗಿ ಅಚ್ಚರಿಯನ್ನುಂಟು ಮಾಡೋದು ಅವರ ಸ್ಟೈಲ್. ಅಷ್ಟಕ್ಕೂ ನಾವು ಆ ಪಂದ್ಯವನ್ನು ಗೆದ್ದುಕೊಂಡಿದ್ದೇವು. ಕೊನೆಯ ಕ್ಷಣದಲ್ಲಿ ನನ್ನ ತಲೆಯಲ್ಲಿ ವಿದಾಯದ ಬಗ್ಗೆನೇ ಯೋಚನೆಯಾಗಿತ್ತು. ಕೊನೆಯ ಮೂರು ನಾಲ್ಕು ಓವರ್‍ಗಳಲ್ಲಿ ಏನು ಮಾಡಿದ್ದೇನೆ ಎಂಬುದೇ ನನಗೆ ಗೊತ್ತಿಲ್ಲ ಅಂತ ಗಂಗೂಲಿ ಹೇಳಿದ್ದಾರೆ.
ಆ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು 172 ರನ್‍ಗಳಿಂದ ಪರಾಭವಗೊಳಿಸಿತ್ತು. ಅಲ್ಲದೆ ಟೀಮ್ ಇಂಡಿಯಾದ ಮಾಜಿ ನಾಯಕನಿಗೆ ಧೋನಿ ಹುಡುಗರು ಅರ್ಥಪೂರ್ಣ ವಿದಾಯವನ್ನೇ ಹೇಳಿದ್ದರು. ಇನ್ನು ಮಯಾಂಕ್ ಅಗರ್‍ವಾಲ್ ಅವರು ಕೆಲವೊಂದು ಪಂದ್ಯಗಳ ಚಿತ್ರಗಳನ್ನು ಗಂಗೂಲಿಗೆ ತೋರಿಸುತ್ತಿದ್ದರು. ಆ ಚಿತ್ರಗಳನ್ನೆಲ್ಲಾ ಗಂಗೂಲಿ ನೆನಪಿಸಿಕೊಂಡು ಆ ಕ್ಷಣಗಳನ್ನು ನೆನಪು ಮಾಡಿಕೊಳ್ಳುತ್ತಿದ್ದರು.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026
Tags: bccidadaDHONIICCMS DhonimsdSourav Gangulyteam india
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram