ನನಗೆ ಕಾಂಗ್ರೆಸ್ -ಜೆಡಿಎಸ್ ನಲ್ಲಿ ಶತ್ರುಗಳಿಲ್ಲ : ಸಾಹುಕಾರ್
ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ನನಗೆ ಯಾವ ಶತ್ರುಗಳಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಡಿ ಪ್ರಕರಣದ ಬೆನ್ನಲ್ಲೇ ಅಜ್ಞಾತಕ್ಕೆ ತೆರಳಿದ್ದ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ ನಡೆಸಿದರು. ನಾನು ಅಪರಾಧಿಯಲ್ಲ, ನಿರಪರಾದಿ. ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ನನಗೆ ನೈತಿಕ ಬೆಂಬಲ ನೀಡಿದ್ದಾರೆ.
ನನ್ನ ರಾಜಕೀಯ ಜೀವನ ಅಂತ್ಯಗೊಳಿಸಲು ಸಂಚು ರೂಪಿಸಲಾಗಿದೆ. ಈ ವಿಷಯದಲ್ಲಿ ಸೋದರ ಬಾಲಚಂದ್ರ ಜಾರಕಿಹೊಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ರು.
ಇದೇ ವೇಳೆ ಸಿಡಿ ಹಿಂದೆ ಇರುವ ಇಬ್ಬರ ನಾಯಕರಿದ್ದಾರೆ. ಸಮಯ ಬಂದಾಗ ಅವರಿಬ್ಬರ ಹೆಸರನ್ನ ಬಹಿರಂಗಗೊಳಿಸುತ್ತದೆ. ಸಿಡಿ ಷಡ್ಯಂತ್ರ ಹಿಂದಿರುವವರನ್ನು ಜೈಲಿಗೆ ಕಳುಹಿಸುತ್ತೇನೆ.
ಈ ಸಂಬಂಧ ಕಾನೂನು ಹೋರಾಟ ನಡೆಸುತ್ತೇನೆ. ಎಷ್ಟೇ ಖರ್ಚು ಆಗಲಿ, ಅವರನ್ನ ಜೈಲಿಗೆ ಕಳುಹಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ವಿರೋಧಿಗಳಿಗೆ ಚಾಲೆಂಜ್ ಹಾಕಿದ್ದಾರೆ.
ನನಗೆ ವಿಡಿಯೋ ರಿಲೀಸ್ ಬಗ್ಗೆ 24 ಗಂಟೆಗೆ ಮೊದಲೇ ಗೊತ್ತಿತ್ತು. ಹೈಕಮಾಂಡ್ ಮಟ್ಟದಲ್ಲಿರುವ ಆಪ್ತರು ಕಾನೂನಿನ ಕ್ರಮ ತೆಗೆದುಕೊಳ್ಳು ಸಲಹೆ ನೀಡಿದ್ದರು.
ಆದ್ರೆ ನಾನು ಸಿಎಂ ಜತೆ ಸಭೆ ನಡೆಸಿ ಮೈಸೂರಿಗೆ ಹೋಗಿದ್ದಾಗ, ವಿಡಿಯೋ ರಿಲೀಸ್ ಆಗಿರುವ ವಿಷಯ ತಿಳಿಯಿತು.
ಇದರಲ್ಲಿ 2+3+4 ಜನರ ಷಡ್ಯಂತ್ರ ಅಡಗಿದೆ.ಇಂತಹ 10 ದೂರುಗಳು ಬಂದ್ರೂ ನಾನು ಫೇಸ್ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.