ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ನಾನು ಜನ ಸೇವೆ ಮಾಡಿದ್ದೇನೆ ಎಂದು ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಕಾಲದಲ್ಲಿ ಸಚಿವನಾಗಿದ್ದೆ. ಆವಾಗ ನಾನು ಯಾವುದೇ ರೀತಿಯ ಕಾನೂನು ಬಾಹಿರ ಕೆಲಸ ಮಾಡಲಿಲ್ಲ. ಅಂತಃಕರಣದಿಂದ ಕೆಲಸ ಮಾಡಿದ್ದೇನೆ ಎಂದಿದ್ದಾರೆ.
ನಿನ್ನೆ ರಾತ್ರಿ ಸರ್ಕಾರ ವರದಿ ಪಡೆದಿದೆ. ಎಲ್ಲರೂ ಸೇರಿ ಗುಣಾಕಾರ-ಭಾಗಾಕಾರ ಲೆಕ್ಕ ಮಾಡಿದ್ದಾರೆ. ನಾನು ಆಗ ಅತಃಕರಣದಿಂದ ಕೆಲಸ ಮಾಡಿದ್ದೇನೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
ನಾನು ಕಾಂಗ್ರೆಸ್ ಮಾಡಿರುವ ಆರೋಪವನ್ನು ಎದುರಿಸುತ್ತೇನೆ. ಆತ್ಮವಂಚನೆ ಮಾಡಿಕೊಳ್ಳದೇ ನನ್ನ ಪ್ರಾಣ ಒತ್ತೆ ಇಟ್ಟು ಊಟ, ತಿಂಡಿ ಮರೆತು ಹಗಲಿರುಳು ಜನರ ಸೇವೆ ಮಾಡಿದ್ದೇನೆ. ಈ ಸರ್ಕಾರವೇ ಹಗಲು ದರೋಡೆ ಮಾಡುತ್ತಿದೆ. ಇವರ ಆರೋಪಿಗಳಿಗೆ ನಾನು ಹೆದರುವುದಿಲ್ಲ ಎಂದು ಹೇಳಿದ್ದಾರೆ.








