ಗದಗ: ಅನ್ವರ್ ಮಾಣಿಪ್ಪಾಡಿ ವಕ್ಫ್ ಬಗ್ಗೆ ಮಾತನಾಡಿರುವುದನ್ನು ಆಧರಿಸಿ ನಾನು ಮಾತನಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.
ಜಿಲ್ಲೆಯ ಜಿಲ್ಲೆಯ ರೋಣ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿವೈ ವಿಜಯೇಂದ್ರ 150 ಕೋಟಿ ರೂ. ಆಮಿಷ ಒಡ್ಡಿದ ಬಗ್ಗೆ ಮಾಣಿಪ್ಪಾಡಿ (Anwar Manipaddy) ಅವರು ಅವರದ್ದೇ ವಿಡಿಯೋದಲ್ಲಿ ಹೇಳಿದ್ದಾರೆ. ಹೀಗಾಗಿ ಅದರ ಆಧಾರದ ಮೇಲೆ ನಾನು ಮಾತನಾಡಿದ್ದೇನೆ. ಹೀಗಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದಿದ್ದಾರೆ.
ಅವರೇ, ಸಿಬಿಐ ತನಿಖೆಗೆ ಕೊಡಲಿ. ವಿಡಿಯೋದಲ್ಲಿರುವ ಧ್ವನಿ ಮಾಣಿಪ್ಪಾಡಿ ಅವರದ್ದೋ? ಅಲ್ಲವೋ? ಎಂದು ಮಾಧ್ಯಮದವರಿಗೆ ಚೆನ್ನಾಗಿ ಗೊತ್ತಿರುತ್ತದೆ ತಾನೇ? ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ. ಅವರು ಸಿಬಿಐಗೆ ಕೊಡಲಿ ಎಂದು ಸವಾಲು ಹಾಕಿದ್ದಾರೆ.
ಸೋಮವಾರದಿಂದ ಬುಧವಾರವರೆಗೆ ಸುವರ್ಣಸೌಧದಲ್ಲಿ ಉತ್ತರ ಕರ್ನಾಟಕ ಬಗ್ಗೆ ಚರ್ಚೆ ಮಾಡುತ್ತೇವೆ. ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದಿದ್ದಾರೆ.








