ನಾನು ಕಾಂಗ್ರೆಸ್ ಪಾರ್ಟಿ ಬಿಟ್ಟು ದೊಡ್ಡ ತಪ್ಪು ಮಾಡಿದೆ : ಎಂಟಿಬಿ
ಚಿಕ್ಕಬಳ್ಳಾಪುರ: ನಾನು ಕಾಂಗ್ರೆಸ್ ಪಾರ್ಟಿ ಬಿಟ್ಟು ದೊಡ್ಡ ತಪ್ಪು ಮಾಡಿದೆ ಎಂದು ಸಚಿವ ಎಂಟಿಬಿ ನಾಗರಾಜ್ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಬಾಗೇಪಲ್ಲಿ ಪಟ್ಟಣದ ಪುರಸಭೆಯಲ್ಲಿ ವಸತಿನಿಲಯಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ನನ್ನ ಜೀವನದಲ್ಲಿ ಮಾಡಿದ ತಪ್ಪು ಕಾಂಗ್ರೆಸ್ ಪಕ್ಷ ಬಿಟ್ಟಿದ್ದು. ಈ ಹಿಂದೆ ಕೂಡಾ ಎಂಟಿಬಿ ನಾಗಾರಾಜ್ ಬಿಜೆಪಿ ಸರಕಾರದ ವಿರುದ್ಧ ಟ್ವೀಟರ್ ನಲ್ಲಿ ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.
ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹOಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ. @BSYBJP @BSBommai @BJP4Karnataka #MTB
— N.Nagaraj (MTB) (@MtbNagaraju) August 7, 2021
ಅಲ್ಲದೇ ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎನ್ನುವ ಮೂಲಕ ಅಸಮಾಧಾನ ಹೊರ ಹಾಕಿದ್ದು, ಈಗ ಮತ್ತೆ ಪಕ್ಷದ ವಿರುದ್ಧ ತಮ್ಮ ಹತಾಶೆ ಮನೋಭಾವನೆಯನ್ನು ತೋಡಿಕೊಂಡಿದ್ದಾರೆ.
ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಎಂಟಿಬಿ, ಬಿಜೆಪಿ ಬಗ್ಗೆ ಅಸಮಾಧಾನ ಇಲ್ಲ, ನನ್ನ ಹೇಳಿಕೆಗೆ ಬೇರೆ ಅರ್ಥ ಬೇಡ. ಪಕ್ಷಾಂತರದ ಬಗೆಗಿನ ನನ್ನ ಹೇಳಿಕೆ ನೈತಿಕ ಮತ್ತು ಸೈದ್ಧಾಂತಿಕವಾದದ್ದು. ಯಾರೇ ಆಗಲಿ ಪಕ್ಷಾಂತರ ಮಾಡುವುದು ತಪ್ಪು ಎನ್ನುವ ಅರ್ಥದಲ್ಲಿ ಮಾತನಾಡಿದ್ದೇನೆ. ಇದರ ಹೊರತು ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಹೇಳಿದ್ದಾರೆ.