ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಕುರಿತು ರಾಜಕೀಯ ವಲಯದಲ್ಲಿ ನಿರಂತರ ಚರ್ಚೆ ನಡೆಯುತ್ತಲೇ ಇದೆ. ಸರ್ಕಾರ ಸ್ಥಾಪನೆಯಾದ ದಿನದಿಂದಲೇ, ಮೈತ್ರಿ ಸರಕಾರದಲ್ಲಿ ನಾಯಕತ್ವ ಬದಲಾವಣೆ ಆಗಬಹುದೇ ಎಂಬ ಅನುಮಾನಗಳು ಕಾಡುತ್ತಿದ್ದವು. ಆದರೆ ಈ ಎಲ್ಲಾ ಊಹಾಪೋಹಗಳಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹೊಸ ಹೇಳಿಕೆಯ ಮೂಲಕ ತಕ್ಕ ಉತ್ತರ ನೀಡಿದ್ದಾರೆ.
ನಾನೇ ಮುಂದಿನ 5 ವರ್ಷ ಸಿಎಂ
ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಕುತೂಹಲಕರ ಹೇಳಿಕೆ ಹೊರಬಿದ್ದಿದೆ. ಬಿಜೆಪಿ ಶಾಸಕರು ಪ್ರಶ್ನೆ ಮಾಡಿದ್ದಕ್ಕೆ ಸ್ಪಷ್ಟ ಉತ್ತರ ನೀಡಿದ ಸಿಎಂ, ಹೌದು, ನಾನೇ ಮುಂದಿನ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ. ನಾವು 5 ವರ್ಷ ಅಧಿಕಾರ ನಡೆಸುತ್ತೇವೆ ಮತ್ತು ಮತ್ತೆ ಗೆದ್ದು ಬರುತ್ತೇವೆ ಎಂದು ಘೋಷಿಸಿದರು.
ಪಕ್ಷದಲ್ಲಿ ಬೂದಿಮುಚ್ಚಿದ ಕೆಂಡದಂತೆ ಚರ್ಚೆ
ಕಾಂಗ್ರೆಸ್ ಪಕ್ಷದ ಒಳಗಡೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಹಲವು ಚರ್ಚೆಗಳು ನಡೆಯುತ್ತಿವೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೆ ಆಕಾಂಕ್ಷಿ ಎಂದು ವರದಿಯಾಗಿದೆ. ಈ ಹಿನ್ನೆಲೆ, ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.
2028ರವರೆಗೆ ಸ್ಥಿರ ಆಡಳಿತದ ವಿಶ್ವಾಸ
ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆಯು ಅವರ ನಾಯಕತ್ವದ ಬಗ್ಗೆ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಮತ್ತು ಸರ್ಕಾರವು ತನ್ನ ಪೂರ್ಣಾವಧಿ ಪೂರೈಸಲಿದೆ ಎಂಬ ನಂಬಿಕೆಯನ್ನು ಬಲಪಡಿಸಿದೆ. ಈ ಹೇಳಿಕೆಯಿಂದ, ಆಂತರಿಕ ರಾಜಕೀಯ ಒತ್ತಡಗಳಿಗೆ ಪ್ರತಿಯಾಗಿ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ.