ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಠೇವಣಿ ತರೋನು ನಾನು, ಸಾಲ ಕೊಡೋನು ನಾನು, ಕೇಳೋಕೆ ಇವನ್ಯಾರು: ರಂಗನಾಥ್ ವಿರುದ್ಧ ಗುಡುಗಿದ ರಾಜಣ್ಣ

I will deposit, I will give loans, who is this to ask: Rajanna thunders against Ranganath

Shwetha by Shwetha
December 20, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ತುಮಕೂರು: ಜಿಲ್ಲಾ ಸಹಕಾರ ಬ್ಯಾಂಕ್ (ಡಿಸಿಸಿ) ಸಾಲ ಹಂಚಿಕೆ ವಿಚಾರವಾಗಿ ತುಮಕೂರು ಜಿಲ್ಲಾ ರಾಜಕಾರಣದಲ್ಲಿ ಭಾರಿ ವಾಕ್ಸಮರ ಶುರುವಾಗಿದೆ. ಬೆಳಗಾವಿ ಅಧಿವೇಶನದಲ್ಲಿ ತಾರತಮ್ಯದ ಬಗ್ಗೆ ದೂರು ನೀಡಿದ್ದ ಕುಣಿಗಲ್ ಶಾಸಕ ಕೆ.ಆರ್.ರಂಗನಾಥ್ ವಿರುದ್ಧ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ.ಎನ್.ರಾಜಣ್ಣ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಕೇಳೋಕೆ ಇವನ್ಯಾರ್ರೀ? ಎಂದು ಗುಡುಗಿದ್ದಾರೆ.

ಮಧುಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮದೇ ದಾಟಿಯಲ್ಲಿ ಕುಣಿಗಲ್ ಶಾಸಕರ ವಿರುದ್ಧ ಹರಿಹಾಯ್ದರು. ಮಧುಗಿರಿ ನನ್ನ ಕ್ಷೇತ್ರ, ಇಲ್ಲಿನ ರೈತರಿಗೆ ನಾನು ಸಾಲ ಕೊಟ್ಟರೆ ಪ್ರಶ್ನಿಸಲು ಇವರು ಯಾರು? ಎಂಬ ಖಾರವಾದ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.

Related posts

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

January 20, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

January 20, 2026

ಬೆಳಗಾವಿ ಅಧಿವೇಶನದಲ್ಲಿ ಏನಾಗಿತ್ತು?

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ್ದ ಕುಣಿಗಲ್ ಶಾಸಕ ರಂಗನಾಥ್, ತುಮಕೂರು ಡಿಸಿಸಿ ಬ್ಯಾಂಕ್ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಮಧುಗಿರಿ ಕ್ಷೇತ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ಸಾಲ ನೀಡಲಾಗಿದೆ. ಆದರೆ, ಕುಣಿಗಲ್ ತಾಲೂಕಿಗೆ ಕೇವಲ 1 ಕೋಟಿ ರೂಪಾಯಿ ನೀಡುವ ಮೂಲಕ ಮಲತಾಯಿ ಧೋರಣೆ ಅನುಸರಿಸಲಾಗಿದೆ. ಸಹಕಾರ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ತಾರತಮ್ಯವನ್ನು ಸರಿಪಡಿಸಬೇಕು ಎಂದು ಸದನದಲ್ಲಿ ಒತ್ತಾಯಿಸಿದ್ದರು.

ರೊಚ್ಚಿಗೆದ್ದ ರಾಜಣ್ಣ, ಅಹಿಂದ ಅಸ್ತ್ರ ಪ್ರಯೋಗ

ಕುಣಿಗಲ್ ಶಾಸಕರ ಈ ಆರೋಪಕ್ಕೆ ಮಧುಗಿರಿಯಲ್ಲಿ ಕೆಂಡಾಮಂಡಲವಾದ ಕೆ.ಎನ್.ರಾಜಣ್ಣ, ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ಹಂಚಿರೋದು ಇವನ ದುಡ್ಡಲ್ಲ, ಇದು ಸರ್ಕಾರದ ಹಣವೂ ಅಲ್ಲ. ಇದು ರೈತರಿಂದಲೇ ಸಂಗ್ರಹಿಸಿದ ಠೇವಣಿ ಹಣ. ಠೇವಣಿ ತರೋನು ನಾನು, ಸಾಲ ಕೊಡೋನು ನಾನು. ಇದರಲ್ಲಿ ತಲೆ ಹಾಕಲು ಇವನ್ಯಾರು ಎಂದು ಶಾಸಕ ರಂಗನಾಥ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ನ್ಯಾಯದ ಪಾಠ

ಇದೇ ವೇಳೆ ಜಾತಿ ಸಮೀಕರಣದ ಲೆಕ್ಕಾಚಾರವನ್ನೂ ರಾಜಣ್ಣ ಬಿಚ್ಚಿಟ್ಟಿದ್ದಾರೆ. ಕುಣಿಗಲ್ ಕ್ಷೇತ್ರದಲ್ಲಿ ಶೇಕಡಾ 70ರಷ್ಟು ಒಕ್ಕಲಿಗ ಸಮುದಾಯದವರಿದ್ದಾರೆ. ಅಲ್ಲಿ ಅಹಿಂದ ವರ್ಗದ ರೈತರ ಸಂಖ್ಯೆ ತೀರಾ ಕಡಿಮೆ. ಆದರೆ, ಮಧುಗಿರಿ ಉಪವಿಭಾಗದಲ್ಲಿ ಚಿತ್ರಣ ಹಾಗಿಲ್ಲ. ಇಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಳಿದ ವರ್ಗದವರು, ದಲಿತರು ಹಾಗೂ ಅಹಿಂದ ರೈತರಿದ್ದಾರೆ. ಸಾಮಾಜಿಕ ನ್ಯಾಯದ ಅಡಿಯಲ್ಲಿ ನನ್ನ ಕ್ಷೇತ್ರದ ಹಿಂದುಳಿದ ಜನರಿಗೆ ನಾನು ಹೆಚ್ಚು ಸಾಲ ನೀಡಿದ್ದೇನೆ. ಮಧುಗಿರಿಯ ಜನರಿಗೆ ಇನ್ನಷ್ಟು ಸಾಲ ಕೊಡುತ್ತೇನೆ, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.

ಡಿಸಿಸಿ ಬ್ಯಾಂಕ್ ಸಾಲದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಬಲ ನಾಯಕರ ನಡುವಿನ ಈ ಬಹಿರಂಗ ಕಾದಾಟ, ಜಿಲ್ಲಾ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಸಹಕಾರಿ ರಂಗದ ಭೀಷ್ಮ ಎಂದೇ ಕರೆಯಲ್ಪಡುವ ರಾಜಣ್ಣನವರ ಈ ಆಕ್ರೋಶಕ್ಕೆ ಕುಣಿಗಲ್ ಶಾಸಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ShareTweetSendShare
Join us on:

Related Posts

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

by Shwetha
January 20, 2026
0

ಹೊಸ ವರ್ಷದ ಆರಂಭದಲ್ಲಿ ಜಂಟಿ ಅಧಿವೇಶನವನ್ನು ಕಡ್ಡಾಯವಾಗಿ ಕರೆಯಬೇಕು ಎಂಬುದು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಅದರ ಅನ್ವಯವೇ ರಾಜ್ಯ ಸರ್ಕಾರ ಈ ವಿಶೇಷ ಅಧಿವೇಶನವನ್ನು ಕರೆದಿದೆ ಎಂದು...

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

by Shwetha
January 20, 2026
0

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಚಾಲಕರಹಿತ (ಡ್ರೈವರ್‌ಲೆಸ್) ಮೆಟ್ರೋ ರೈಲು ಆಗಮಿಸಿದ್ದು, ಇದು ಹಳದಿ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ....

GBA ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲೇ: EVMಗೆ ಕೊಕ್

GBA ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲೇ: EVMಗೆ ಕೊಕ್

by Shwetha
January 20, 2026
0

ಮುಂಬರುವ GBA (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆಯನ್ನು ಈ ಬಾರಿ EVM ಯಂತ್ರಗಳಿಲ್ಲದೆ, ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗ ಮಹತ್ವದ ತೀರ್ಮಾನ ಕೈಗೊಂಡಿದೆ....

ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

by Shwetha
January 20, 2026
0

ಬಾರ್ ಲೈಸೆನ್ಸ್ ನೀಡುವ ವಿಚಾರದಲ್ಲಿ ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ಅಧಿಕೃತ ದೂರು ಸಲ್ಲಿಕೆಯಾಗಿದೆ. ಲಕ್ಷ್ಮೀನಾರಾಯಣ ಎಂಬವರು...

ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಶ್ರೀರಾಮುಲು: ಬಾಲಕಿಯ ಗುರುತು ಬಹಿರಂಗಪಡಿಸಿ ಪೋಕ್ಸೊ ಬಲೆಗೆ ಬಿದ್ದ ಮಾಜಿ ಸಚಿವ

ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಶ್ರೀರಾಮುಲು: ಬಾಲಕಿಯ ಗುರುತು ಬಹಿರಂಗಪಡಿಸಿ ಪೋಕ್ಸೊ ಬಲೆಗೆ ಬಿದ್ದ ಮಾಜಿ ಸಚಿವ

by Shwetha
January 20, 2026
0

ಬಳ್ಳಾರಿ: ಇರಲಾರದೆ ಇರುವೆ ಬಿಟ್ಕೊಳೋದು ಅಂದ್ರೆ ಇದೆನಾ ಎಂಬಂತಾಗಿದೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ಪರಿಸ್ಥಿತಿ. ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಗಣಿ ಜಿಲ್ಲೆ ಬಳ್ಳಾರಿಯಲ್ಲಿ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram