ಮೇಕೆದಾಟು, ಮಹದಾಯಿ ಕುರಿತು ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚಿಸುವೆ – ಬಸವರಾಜ್ ಬೊಮ್ಮಾಯಿ.
ಮೇಕೆದಾಟು, ಮಹದಾಯಿ, ಕೃಷ್ಣಾ ನೀರಾವರಿ ಯೋಜನೆ ಸೇರಿದೇತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ತಮ್ಮ ದೆಹಲಿ ಪ್ರವಾಸ ಕುರಿತು ಮಾಹಿತಿ ನೀಡಿದ ಅವರು, ನನೆಗುದಿಗೆ ಬಿದ್ದಿರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಆಡಳಿತಾತ್ಮಕ ಹಾಗೂ ತಾಂತ್ರಿಕ ಕಾರ್ಯಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಒತ್ತಡ ಹೇರಲಾಗುವುದು ಎಂದರು. ಇದೇ ವೇಳೆ ಜಿಎಸ್ ಟಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೂ ಸಹ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಸಂಗೊಳ್ಳಿ ರಾಯಣ್ಣ ಶಾಲೆಗಳನ್ನು ಸೈನಿಕ ಶಾಲೆಗೆ ಸೇರ್ಪಡೆಗೊಳಿಸುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೂ ಚರ್ಚಿಸಲಾಗುತ್ತದೆ. ಇಂಧನ ಹಾಗೂ ಗೃಹ ಸಚಿವರನ್ನೂ ಸಹ ಭೇಟಿ ಮಾಡುವ ಯೋಜನೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು








