ನವದೆಹಲಿ : ಸತ್ಯದ ಅಸ್ತ್ರದ ಮೂಲಕವೇ ಪ್ರಜಾಪ್ರಭುತ್ವದ(Democracy) ಉಳಿವಿಗೆ ಹೋರಾಟ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಮಾನಹಾನಿ ಪ್ರಕರಣದಲ್ಲಿ (Defamation Case) ಜೈಲು ಶಿಕ್ಷೆಗೆ ಗುರಿಯಾಗಿದ್ದ ರಾಹುಲ್ ಗಾಂಧಿ (Rahul Gandhi) ಸೂರತ್ ಜಿಲ್ಲಾ ನ್ಯಾಯಲಯದ ಆದೇಶ ಪ್ರಶ್ನಿಸಿ ಸೆಷನ್ಸ್ ನ್ಯಾಯಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮೇಲ್ಮನವಿ ಅರ್ಜಿಯನ್ನು ಮೇ 3 ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ. ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 13ರ ವರೆಗೂ 15 ಸಾವಿರ ರೂ.ನ ಹೊಸ ಜಾಮೀನು ವಿಸ್ತರಿಸಿದೆ ಎನ್ನಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಸತ್ಯವೇ ನನ್ನ ಅಸ್ತ್ರʼ ಎಂದು ಗುಡುಗಿದ್ದಾರೆ. ಅಲ್ಲದೇ ಇದು ʻಮಿತ್ರಕಾಲʼದ ವಿರುದ್ಧ ಪ್ರಜಾಪ್ರಭುತ್ವ ಉಳಿಸುವ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಶ್ರಯ ಎಂದು ಹೇಳಿದ್ದಾರೆ.
ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಹೀಗಾಗಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್ (Surat Court) ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.