ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ನಾನು ನಾಯಕನಾಗಿರುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ತಮ್ಮ ನಾಯಕತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂಬುದನ್ನು ಘೋಷಿಸುವ ಮೂಲಕ, ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟಿಸಿರುವ ಅವರು, ಕಾಂಗ್ರೆಸ್ ನಾಯಕರಿಗೆ ಕೂಡ ಈ ಸಂದೇಶವನ್ನು ಕಳಿಸಿದ್ದಾರೆ.
KPCC ಅಧ್ಯಕ್ಷ ಸ್ಥಾನವನ್ನು ಡಿಕೆಶಿ ಬಳಿಯಿಂದ ತೆಗೆಯುವ ಉದ್ದೇಶದಿಂದ ದಲಿತ ಸಚಿವರು ನಡೆಸುತ್ತಿರುವ ಆಂತರಿಕ ಚಟುವಟಿಕೆಗಳು, ಜೊತೆಗೆ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳ ನಡುವೆಯೇ, ಡಿಕೆಶಿ ಈ ಮಹತ್ವದ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಕೊಟ್ಟ ಭರವಸೆಗಳಂತೆ, ‘ಒಲ್ಡ್ ಪೆನ್ಷನ್ ಸ್ಕೀಮ್’ (OPS) ಜಾರಿಗೆ ತರುತ್ತೇವೆ. ಜನರಿಗೆ ನಾವು ಮಾಡಿರುವ ಪ್ರತಿಯೊಂದು ಭರವಸೆಯನ್ನೂ ಕಾರ್ಯಗತಗೊಳಿಸುತ್ತೇವೆ ಎಂದು ಹೇಳಿದ್ದಾರೆ.
ಈ ಹೇಳಿಕೆಯು ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕೀಯದಲ್ಲೂ ಮಹತ್ವ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳಿಗೆ ದಾರಿ ಮಾಡುವ ಸಾಧ್ಯತೆ ಇದೆ.








