ಬೆಂಗಳೂರು: ಅಧ್ಯಕ್ಷಗಿರಿಗೆ (KPCC President) ನಾನು ಲಾಬಿ ಮಾಡಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇನು ಲಾಬಿ ಮಾಡಿಲ್ಲ. ಲಾಬಿ ಮಾಡುವ ಸಂದರ್ಭ ಕೂಡ ಬಂದಿಲ್ಲ. ಸಾಕಷ್ಟು ಮಂದಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಇದ್ದಾರೆ. ಸಚಿವ ರಾಜಣ್ಣ ಕೂಡ ಹೇಳಿದ್ದಾರೆ. ಹೈಕಮಾಂಡ್ ಬಯಸಿದರೆ ಸಂಪುಟ ಪುನಾರಚನೆ ಕೂಡ ಆಗುತ್ತದೆ.
ವಿಧಾನ ಪರಿಷತ್ (Vidhan Parishad) ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹಿರಿಯರನ್ನು ಕಡೆಗಣಿಸಲಾಗಿದೆ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 4 ಗೋಡೆಗಳ ನಡುವೆ ಚರ್ಚೆ ಆಗುತ್ತದೆ. ಹಿಂದೆ 9 ಜನರ ಸಮಿತು ಇತ್ತು. ಸಮ್ಮಿಶ್ರ ಸರ್ಕಾರದಲ್ಲೂ ಸಮನ್ವಯ ಸಮಿತಿ ಇತ್ತು. ಈ ವಿಚಾರದಲ್ಲಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.