ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ
ತಮಿಳುನಾಡಿನ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಐ ಎ ಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಚಿಕಿತ್ಸೆ ಪಡೆಯುತ್ತಿರು ಕಮಾಂಡೋ ಆಸ್ಪತ್ರೆಗೆ ರಾಜ್ಯ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಬೇಟಿ ನೀಡಿ ವಿಚಾರಿಸಿದರು. ವರುಣ್ ಸಿಂಗ್ ಅವರ ತಂದೆ ತಾಯಿ ಗಳನ್ನ ಬೇಟಿ ಮಾಡಿ ಧೈರ್ಯ ತುಂಬಿದರು..
ವರುಣ್ ಸಿಂಗ್ ಕಳೆದ ತಿಂಗಳ ಹಿಂದೆಯಷ್ಟೆ ರಾಷ್ಟ್ರಪತಿಗಳಿಂದ ಶೌರ್ಯ ಪ್ರಶಸ್ತಿ ಗೆ ಭಾಜನರಾಗಿದ್ದರು. ಐಎಎಫ್‌ನ ಜಿಪಿ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.








