IAS vs IPS : ಸ್ಥಳ ನಿಯೋಜನೆ ಮಾಡದೆ ರೂಪಾ, ರೋಹಿಣಿ ಇಬ್ಬರೂ ಅಧಿಕಾರಿಗಳ ವರ್ಗಾವಣೆ…
ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳ ಮೂಲಕ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ವರ್ಗಾವಣೆ ಮಾಡಲಾಗಿದೆ.
ಡಿ. ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಆರ್)ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರಕ್ಕೆ ಮಜುಗರ ತಂದಿದ್ದ ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮುಖ್ಯಕಾರ್ಯದರ್ಶಿಗಳಿಗೆ ಕ್ರಮ ಕೈಗೊಳ್ಳಲು ನಿನ್ನೆ ಸರ್ಕಾರ ಸೂಚನೆ ನೀಡಿತ್ತು. ನಿನ್ನೆ ಇಬ್ಬರ ಅಧಿಕಾರಿಗಳು ಮುಖ್ಯ ಕಾರ್ಯದರ್ಶಿ ಅವರ ಮಂದೆ ಬಂದು ದೂರು ದಾಖಲಿಸಿದ್ದರು.
ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಮತ್ತು ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ.
ಧಾರ್ಮಿಕ ದತ್ತಿ ಇಲಾಖೆಯ ಆಯಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರ ಸ್ಥಾನಕ್ಕೆ ಬಸವರಾಜೇಂದ್ರ ಎಚ್ ಅವರನ್ನು ನೇಮಕ ಮಾಡಲಾಗಿದ್ದು, ಡಿ.ರೂಪಾ ಅವರ ಸ್ಥಾನಕ್ಕೆ ಭಾರತಿ.ಡಿ ಎಂಬುವವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
IAS vs IPS: Transfer of both officers Rupa, Rohini without placement…








