Irahim sutar | ಇಬ್ರಾಹಿಂ ಸುತಾರ ನಿಧನ : ಸಿದ್ದರಾಮಯ್ಯ ಸಂತಾಪ
ಬೆಂಗಳೂರು : ಕನ್ನಡದ ಕಬೀರ ಎಂದೇ ಹೆಸರಾಗಿದ್ದ ಇಬ್ರಾಹಿಂ ಸುತಾರ ಅವರ ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. Siddaramaiah condolences saaksha tv
ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ.. ‘ಕನ್ನಡದ ಕಬೀರ’ರೆಂದೇ ಖ್ಯಾತಿ ಪಡೆದಿದ್ದ ಜನಪರ ಪ್ರವಚನಕಾರ ಇಬ್ರಾಹಿಂ ಸುತಾರ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು.
ಜಾತಿ-ಧರ್ಮಗಳ ಹೆಸರಲ್ಲಿ ಮನಸ್ಸುಗಳನ್ನು ಒಡೆಯಲಾಗುತ್ತಿರುವ ದಿನಗಳಲ್ಲಿ ಪ್ರವಚನಕಾರ ಸುತಾರ ಅವರು ಭಾವೈಕ್ಯದ ಕೊಂಡಿಯಾಗಿದ್ದರು.
https://twitter.com/siddaramaiah/status/1489813349739024384?s=20&t=IA6t5VLgjdi-qK8SS_8qPg
ಅವರ ಸಾವು ತುಂಬಿ ಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಕೋರುವೆ ಎಂದು ಸಂತಾಪ ಸೂಚಿಸಿದ್ದಾರೆ.
ಇಬ್ರಾಹಿಂ ಸುತಾರ ಅವರು ಇಂದು ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಬ್ರಾಹಿಂ ಸುತಾರ ಅವರು ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ.
ತಕ್ಷಣ ಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಉಸಿರು ನಿಲ್ಲಿಸಿದ್ದಾರೆ.








