Irahim sutar | ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ
ಬೆಂಗಳೂರು : ಇಬ್ರಾಹಿಂ ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಇಬ್ರಾಹಿಂ ಸುತಾರ ಅವರು ಇಂದು ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಬ್ರಾಹಿಂ ಸುತಾರ ಅವರು ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ.
ತಕ್ಷಣ ಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಉಸಿರು ನಿಲ್ಲಿಸಿದ್ದಾರೆ.
ಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕೃತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ.
ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/ZC1iMKG5mq
— H D Kumaraswamy (@hd_kumaraswamy) February 5, 2022
ಸುತಾರರ ನಿಧನಕ್ಕೆ ಹೆಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದು, ಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕೃತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ.
ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.