‘ಕನ್ನಡದ ಕಬೀರ’ರ ಅಗಲಿಕೆಗೆ ಸಿಎಂ ಸಂತಾಪ
ಬೆಂಗಳೂರು : ಕನ್ನಡದ ಕಬೀರ ಎಂದೇ ಹೆಸರಾಗಿದ್ದ ಇಬ್ರಾಹಿಂ ಸುತಾರ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಸಂತರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. Ibrahim_sutar no more Bommai Condolences Saaksha tv
ಬೊಮ್ಮಾಯಿ ಟ್ವಿಟ್ಟರ್ ನಲ್ಲಿ.. “ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರು ಇಂದು ಮುಂಜಾನೆ ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ.
ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಶ್ರಮಿಸಿದ ಅವರ ದಿವ್ಯಾತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇಬ್ರಾಹಿಂ ಸುತಾರ ಅವರು ಇಂದು ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಬ್ರಾಹಿಂ ಸುತಾರ ಅವರು ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ.
ತಕ್ಷಣ ಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಉಸಿರು ನಿಲ್ಲಿಸಿದ್ದಾರೆ.









