ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ – ಐಸಿಸಿ

1 min read
virat kohli kaine williamson test cricket saakshatv

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ – ಐಸಿಸಿ

team india saakshatv wtc finalಜೂನ್ ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಸ್ಪಷ್ಟಪಡಿಸಿದೆ.

ಭಾರತದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಯುಕೆ ಸರ್ಕಾರ ಭಾರತವನ್ನು ರೆಡ್ ಲೀಸ್ಟ್‍ನಲ್ಲಿಟ್ಟಿದೆ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್‍ಷಿಪ್ ಗಾಗಿ ಭಾರತ ಇಂಗ್ಲೆಂಡ್‍ಗೆ ತೆರಳಲು ಕಷ್ಟವಾಗಬಹುದು. ಇದನ್ನು ಗಮನದಲ್ಲಿಟ್ಟುಕೊಂಡಿರುವ ಐಸಿಸಿಯು ಯುಕೆ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನಿಗದಿತ ದಿನಾಂಕದಂದೇ ನಡೆಯಲಿದೆ ಎಂದು ಐಸಿಸಿ ವಿಶ್ವಾಸ ವ್ಯಕ್ತಪಡಿಸಿದೆ.
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಜೂನ್ 18ರಿಂದ 22ರವರೆಗೆ ಇಂಗ್ಲೆಂಡ್ ನ ಸೌತಾಂಪ್ಟನ್ ನಲ್ಲಿ ನಡೆಯಲಿದೆ. ಫೈನಲ್ ನಲ್ಲಿ ನ್ಯೂಜಿಲೆಂಡ್ ಮತ್ತು ಟೀಮ್ ಇಂಡಿಯಾ ಕಾದಾಟ ನಡೆಸಲಿವೆ.
wtc final saakshatv test cricketವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯ ಜೈವಿಕ ಸುರಕ್ಷತೆಯಡಿಯಲ್ಲಿ ನಡೆಯಲಿದೆ. ಉಭಯ ತಂಡಗಳು ಸರ್ಕಾರದ ಮಾರ್ಗಸೂಚಿಗಳನ್ನು ಪರಿಪಾಲಿಸಿಕೊಂಡು ಆಡಬೇಕಿದೆ.
ಈಗಾಗಲೇ ಭಾರತದಲ್ಲಿ ಕೋವಿಡ್ ಸೋಂಕಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದ್ರೆ ಜೂನ್ ವೇಳೆಯಲ್ಲಿ ಕೋವಿಡ್ ಸೋಂಕಿನ ಆರ್ಭಟ ಕಮ್ಮಿಯಾಗುವ ನಿರೀಕ್ಷೆ ಇದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd