ಬಹುನಿರೀಕ್ಷಿತ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ (ICC ODI World Cup 2023 schedule) ಪ್ರಕಟವಾಗಿದೆ.
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ಆರಂಭವಾಗಿ ನವೆಂಬರ್ 19ರ ವರೆಗ ನಡೆಯಲಿದೆ. ಟೂರ್ನಿಯ ಸೆಮಿಫೈನಲ್ ಪಂದ್ಯವು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದ್ದು, ಅಂತಿಮ ಫೈನಲ್ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್ನಲ್ಲಿ ನಡೆಯಲಿದೆ.
ಭಾರತ ತಂಡವು ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಕ್ವಾಲಿಫೈಯರ್ 1, ಕ್ವಾಲಿಫೈಯರ್ 2 ವಿರುದ್ಧ ಸೆಣೆಸಾಟ ನಡೆಯಲಿದೆ. ಭಾರತ ಹಾಗೂ ಪಾಕ್ ಮಧ್ಯೆ ಅಕ್ಟೋಬರ್ 15ರಂದು ಪಂದ್ಯ ನಡೆಯಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.
ಭಾರತ ಪಂದ್ಯದ ಸಂಪೂರ್ಣ ವೇಳಾಪಟ್ಟಿ:
ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
ಭಾರತ vs ಅಫ್ಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ
ಭಾರತ vs ಪಾಕಿಸ್ತಾನ- 15 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್
ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ
ಭಾರತ vs ನ್ಯೂಜಿಲೆಂಡ್- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ
ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ
ಭಾರತ vs ಕ್ವಾಲಿಫೈಯರ್ 2- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ
ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ
ಭಾರತ vs ಕ್ವಾಲಿಫೈಯರ್ 1- 11 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ








