ICC ODI Ranking – ಪಾಕಿಸ್ತಾನ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಭಾರತ…
ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲೇ ದಾಖಲೆಯ 10 ವಿಕೆಟ್ಗಳ ಜಯ ದಾಖಲಿಸುವ ಮೂಲಕ ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಮಹತ್ವದ ಸ್ಥಾನ ಪಡೆದಿದೆ. ICC ಪ್ರಕಟಿಸಿದ ನೂತನ ಏಕದಿನ ರ್ಯಾಕಿಂಗ್ ಪಟ್ಟಿಯಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಹಿಂದಿಕ್ಕಿ 3ನೇ ಸ್ಥಾನ ಪಡೆದುಕೊಂಡಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯಕ್ಕೂ ಮುನ್ನ 105 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದ ಭಾರತ ತಂಡ, ಗೆಲುವಿನ ಬಳಿಕ 108 ಪಾಯಿಂಟ್ಗಳೊಂದಿಗೆ ಮೂರನೇ ಸ್ಥಾನಕ್ಕೆ ಜಿಗಿದಿದೆ. 106 ಪಾಯಿಂಟ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಪಾಕಿಸ್ತಾನ 4ನೇ ಸ್ಥಾನಕ್ಕೆ ಕುಸಿದಿದೆ. ICC ODI Ranking – India Surpass Pakistan In ODI Rankings After Thumping Win Over England
ಉಳಿದಂತೆ, 126 ಅಂಕಗಳೊಂದಿಗೆ ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿದ್ದರೆ, 122 ಅಂಕಗಳೊಂದಿಗೆ ಇಂಗ್ಲೆಂಡ್ ತಂಡ ಎರಡನೇ ಸ್ಥಾನದಲ್ಲಿದೆ. ಇನ್ನು 101 ಅಂಕಗಳೊಂದಿಗೆ ಆಸ್ಟ್ರೇಲಿಯಾ ಐದನೇ ಸ್ಥಾನದಲ್ಲಿದ್ದರೆ, 99 ಅಂಕಗಳನ್ನು ಪಡೆದ ಸೌತ್ ಅಫ್ರಿಕಾ ಆರನೇ ಸ್ಥಾನದಲ್ಲಿದೆ. ಬಾಂಗ್ಲಾದೇಶ, ಶ್ರೀಲಂಕಾ, ಮತ್ತು ವೆಸ್ಟ್ ಇಂಡೀಸ್ ಕ್ರಮವಾಗಿ ಏಳು, ಎಂಟು ಮತ್ತು ಒಂಭತ್ತನೇ ಸ್ಥಾನದಲ್ಲಿವೆ.
ನಿನ್ನೆ ಕೆನಿಂಗ್ಟನ್ ಓವೆಲ್ನಲ್ಲಿ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ ಬೂಮ್ರಾ 6 ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ ಬ್ಯಾಟರ್ಗಳ ಆಟಕ್ಕೆ ಕಡಿವಾಣ ಹಾಕಿದ್ದರು. ರೋಹಿತ್ ಶರ್ಮಾ ಬಳಗ ಯಾವುದೇ ವಿಕೆಟ್ ನಷ್ಟವಿಲ್ಲದೇ ಮ್ಯಾಚ್ ಗೆದ್ದು ಬೀಗಿತು..