ಐಸಿಸಿ ಟಿ-20 ರ್ಯಾಂಕಿಂಗ್ : 4ನೇ ಸ್ಥಾನಕ್ಕೇರಿದ ವಿರಾಟ್ Virat Kohli saaksha tv
ದುಬೈ : ಐಸಿಸಿ ಟಿ-20 ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ.
ಈ ಹಿಂದೆ ನಾಲ್ಕನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ತಂಡದ ಆಟಗಾರ ಡೇವಿಡ್ ಕಾನ್ವೆ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ.
ಇನ್ನುಳಿದಂತೆ ರ್ಯಾಂಕಿಂಗ್ ಪಟ್ಟಿನಲ್ಲಿ ಇಂಗ್ಲೆಂಡ್ ನ ಡೇವಿಡ್ ಮಲನ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.
ಪಾಕಿಸ್ತಾನದ ನಾಯಕ ಬಾಬರ್ ಅಜಂ ಎರಡನೇ ಸ್ಥಾನದಲ್ಲಿದ್ದು, ಮೂರನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ನಾಯಕ ಆರೋನ್ ಫಿಂಚ್ ಇದ್ದಾರೆ.
ಇನ್ನು ಕನ್ನಡಿಗ ಕೆ.ಎಲ್.ರಾಹುಲ್ ಟಾಪ್ 10 ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದು, ಆರನೇ ಸ್ಥಾನ ಪಡೆದುಕೊಂಡಿದ್ದಾರೆ.