ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಟೀಂ ಇಂಡಿಯಾ ಕುಸಿತ
ದುಬೈ: ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಕುಸಿತ ಕಂಡಿದೆ.
ಇಂದು ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆ್ಯಶಸ್‌ನಲ್ಲಿ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ.
ಆ ಮೂಲಕ ವಿಶ್ವದ ನಂಬರ್ ಒನ್ ಟೆಸ್ಟ್ ತಂಡವಾಗಿ ಹೊರಹೊಮ್ಮಿದೆ.
ಇತ್ತ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಸೋತಿರುವ ಭಾರತ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.
ಮೊದಲಸ್ಥಾನದಲ್ಲಿರುವ ಆಸ್ಟ್ರೇಲಿಯಾ 119 ಅಂಕಗಳನ್ನು ಹೊಂದಿದ್ದರೇ ಟೀಂ ಇಂಡಿಯಾ 116 ಅಂಕ ಪಡೆದುಕೊಂಡಿದೆ.
ಇನ್ನು ಎರಡನೇ ಸ್ಥಾನದಲ್ಲಿ ನ್ಯೂಜಿಲೆಂಡ್ ತಂಡವಿದೆ. ಕಿವೀಸ್ ತಂಡ ಬಾಂಗ್ಲಾದೇಶದ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿದೆ.
ಇದರ ಫಲವಾಗಿ ಎರಡನೇ ಸ್ಥಾನದಲ್ಲಿದೆ.
ಇತ್ತ ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಐದನೇ ಸ್ಥಾನಕ್ಕೆ ಜಿಗಿದಿದೆ.
ಆಸ್ಟ್ರೇಲಿಯಾ ವಿರುದ್ಧ ಅತ್ಯಂತ ಹೀನಾಯವಾಗಿ ಸೋಲುಂಡಿರುವ ಇಂಗ್ಲೆಂಡ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಪಾಕಿಸ್ತಾನ ಒಂದು ಸ್ಥಾನ ಕುಸಿದು ಆರನೇ ಸ್ಥಾನಕ್ಕೆ ತಲುಪಿದೆ.









