ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಐಸಿಸಿ ಟೆಸ್ಟ್ ಬೌಲರ್ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೀಗ 907 ರೇಟಿಂಗ್ ಪಾಯಿಂಟ್‌ಗಳನ್ನು ಕಲೆಹಾಕಿರುವ ಬುಮ್ರಾ ಭಾರತೀಯ ಟೆಸ್ಟ್ ಬೌಲರ್‌ಗಳ ಇತಿಹಾಸದಲ್ಲಿ ಹೆಚ್ಚು ರೇಟಿಂಗ್ ಪಾಯಿಂಟ್‌ಗಳನ್ನು ಪಡೆದ ಮೊದಲ ವೇಗಿ ಎಂಬ ಇತಿಹಾಸವನ್ನು ಸೃಷ್ಟಿ ಮಾಡಿದ್ದಾರೆ
ಈ ದಾಖಲೆಯ ಜೊತೆಗೆ ಬುಮ್ರಾ ವಿಶ್ವ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಪ್ರಸ್ತುತ ಇಂಗ್ಲೆಂಡ್‌ನ ಡೆರೆಕ್ ಅಂಡರ್‌ವುಡ್ ಅವರೊಂದಿಗೆ ಜಂಟಿಯಾಗಿ 17 ನೇ ಸ್ಥಾನವನ್ನು ಅಲಂಕರಿಸಿದ್ದಾರೆ.
ಬುಮ್ರಾ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭರ್ಜರಿ ಬೌಲಿಂಗ್ ಮಾಡುವ ಮೂಲಕ 30 ವಿಕೆಟ್‌ಗಳೊಂದಿಗೆ ಸರಣಿಯ ಪ್ರಮುಖ ವಿಕೆಟ್ ಟೇಕರ್ ಕೂಡ ಆಗಿದ್ದಾರೆ.
ಈ ಸಾಧನೆಯೊಂದಿಗೆ, ಬುಮ್ರಾ ಐಸಿಸಿ ಶ್ರೇಯಾಂಕದಲ್ಲಿ ಅತ್ಯಧಿಕ ರೇಟಿಂಗ್ ಹೊಂದಿದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.








