ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿ-ರಿಷಬ್ ಪಂತ್ ಗೆ ಏಳನೇ ಸ್ಥಾನ.. ಕೊಹ್ಲಿಗೆ ಐದನೇ ಸ್ಥಾನ..! @ICC Test rankings # virat kohli #rishab pant # R. Ashwin #axar patel #team india
ಟೀಮ್ ಇಂಡಿಯಾದ ನೂತನ ಹೀರೋ ರಿಷಬ್ ಪಂತ್ ಮತ್ತೊಂದು ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.
ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ರಿಷಬ್ ಪಂತ್ ಏಳನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. 747 ಅಂಕಗಳನ್ನು ಪಡೆದುಕೊಂಡಿರುವ ಪಂತ್, ನ್ಯೂಜಿಲೆಂಡ್ ನ ಹೆನ್ರಿ ನಿಕೊಲಾಸ್ ಮತ್ತು ಟೀಮ್ ಇಂಡಿಯಾದ ರೋಹಿತ್ ಶರ್ಮಾ ಜೊತೆ ಏಳನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಇನ್ನು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 814 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. 2017ರ ನಂತರ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿ ಐದನೇ ಸ್ಥಾನಕ್ಕಿಳಿದಿರುವುದು.
ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರು 919 ಅಂಕಗಳೊಂದಿಗೆ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.
@ICC Test rankings # virat kohli #rishab pant # R. Ashwin #axar patel #team india
ಇನ್ನುಳಿದಂತೆ 891 ಅಂಕ ಪಡೆದಿರುವ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್, 878 ಅಂಕ ಪಡೆದಿರುವ ಆಸ್ಟ್ರೇಲಿಯಾದ ಮಾರ್ನಸ್ ಲಾಬುಸ್ಚೆಂಗ್ನೆ ಹಾಗೂ 831 ಅಂಕ ಗಿಟ್ಟಿಸಿಕೊಂಡಿರುವ ಇಂಗ್ಲೆಂಡ್ ನಾಯಕ ಜೋಯ್ ರೂಟ್ ಅವರು ತಲಾ ಎರಡು, ಮೂರು ಮತ್ತು ನಾಲ್ಕನೇ ಸ್ಥಾನ ಕಾಯ್ದುಕೊಂಡಿದ್ದಾರೆ.
ಹಾಗೇ ಟೀಮ್ ಇಂಡಿಯಾದ ಚೇತೇಶ್ವರ ಪೂಜಾರ 13ನೇ ಸ್ಥಾನದಲ್ಲಿದ್ರೆ, ವಾಷಿಂಗ್ಟನ್ ಸುಂದರ್ 39ನೇ ಸ್ಥಾನ ಪಡೆದುಕೊಂಡಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಭಾರತದ ಆರ್. ಅಶ್ವಿನ್ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅವರು ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಅಲ್ಲದೆ ಅಕ್ಸರ್ ಪಟೇಲ್ 30ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ನ ವೇಗಿ ಜೇಮ್ಸ್ ಆಂಡರ್ಸನ್ ನಾಲ್ಕನೇ ಸ್ಥಾನಕ್ಕೇರಿದ್ದಾರೆ.
ಟೆಸ್ಟ್ ಆಲ್ ರೌಂಡರ್ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ನ ಜೇಸನ್ ಹೋಲ್ಡರ್ ಅಗ್ರ ಸ್ಥಾನದಲ್ಲಿದ್ರೆ, ಇಂಗ್ಲೆಂಡ್ ನ ಬೆನ್ ಸ್ಟೋಕ್ಸ್ ಎರಡನೇ ಸ್ಥಾನದಲ್ಲೇ ಇದ್ದಾರೆ. ಟೀಮ್ ಇಂಡಿಯಾದ ರವೀಂದ್ರ ಜಡೇಜಾ ಮತ್ತು ಆರ್. ಅಶ್ವಿನ್ ಅವರು ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.
@ICC Test rankings # virat kohli #rishab pant # R. Ashwin #axar patel #team india








