Jadeja | ಟೆಸ್ಟ್ ರ್ಯಾಂಕಿಂಗ್ ನಲ್ಲಿ ರಾಕ್ ಸ್ಟಾರ್ ಜಡ್ಡು “ರಾಕಿಂಗ್”..!!!
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಘೀಳಿಟ್ಟಿದ್ದಾರೆ.
ಐಸಿಸಿ ಇತ್ತೀಚೆಗೆ ಪ್ರಕಟಿಸಿದ ರ್ಯಾಂಕಿಂಗ್‌ನಲ್ಲಿ ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
ರವೀಂದ್ರ ಜಡೇಜಾ ಎರಡು ಸ್ಥಾನ ಸುಧಾರಿಸಿ 406 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.
ವೆಸ್ಟ್ ಇಂಡೀಸ್ ನ ಜೇಸನ್ ಹೋಲ್ಡರ್ 382 ಅಂಕಗಳೊಂದಿಗೆ ಒಂದು ಸ್ಥಾನ ಕುಸಿದು ಎರಡನೇ ಸ್ಥಾನದಲ್ಲಿದ್ದಾರೆ.
ಇನ್ನು ಟೀಂ ಇಂಡಿಯಾದ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಕೂಡ ಒಂದು ಸ್ಥಾನ ಕುಸಿದು 347 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್, ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್, ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್, ಕಿವೀಸ್ ಆಟಗಾರರಾದ ಕೈಲಿ ಜಮೀಶನ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಆಸೀಸ್ ಟೆಸ್ಟ್ ಮತ್ತು ಇಂಗ್ಲೆಂಡ್ ಆಟಗಾರ ಕ್ರಿಸ್ ವೋಕ್ಸ್ ಕ್ರಮವಾಗಿ ಟಾಪ್ 10 ರೊಳಗೆ ಸ್ಥಾನ ಪಡೆದಿದ್ದಾರೆ.
ಇತ್ತೀಚೆಗೆ ತವರಿನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಜಡೇಜಾ ಅವರ ಅದ್ಭುತ ಪ್ರದರ್ಶನ ನೀಡಿದರು.
175 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಲ್ಲದೆ, ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದರು.
icc-test-rankings-number-1-all-rounder-ravindra-jadeja









