ICC Test Rankings: ಜಗ್ಗದ ರವಿಚಂದ್ರನ್ ಅಶ್ವಿನ್..! Ravichandran Ashwin
ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟ ಮಾಡಿದ್ದು, ಬೌಲಿಂಗ್, ಆಲ್ ರೌಂಡರ್ ವಿಭಾಗದಲ್ಲಿ ಟೀಂ ಇಂಡಿಯಾದ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ 883 ಅಂಕ ಹಾಗೂ ಆಲ್ ರೌಂಡರ್ ವಿಭಾಗದಲ್ಲಿ 360 ಅಂಕ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.
ಆಲ್ ರೌಂಡ್ ವಿಭಾಗದಲ್ಲಿ ರವೀಂದ್ರ ಜಡೇಜಾ 346 ಅಂಕಗಳೊಂದಿಗೆ ಮೂರನೇ ಸ್ಥಾನ ಕಾಯ್ದುಕೊಂಡಿದ್ದಾರೆ.
🔹 James Anderson breaks into top 5 👊
🔹 Mitchell Starc rises 🔥 #Ashes stars make gains in the latest @MRFWorldwide ICC Men’s Test Player Rankings 📈Details 👉 https://t.co/BRZCOy32hI pic.twitter.com/VTr86Y3riE
— ICC (@ICC) December 29, 2021
ಬೌಲಿಂಗ್ ವಿಭಾಗದಲ್ಲಿ ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ 902 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಪಾಕ್ ವೇಗಿ ಶಾಹಿನ್ ಅಫ್ರಿದಿ 822 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಆಶಸ್ ಸರಣಿಯಲ್ಲಿ ಮಿಂಚಿದ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ 813 ಅಂಕಗಳೊಂದಿಗೆ ಮೂರು ಸ್ಥಾನ ಮೇಲೇರಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಮಾರ್ನಸ್ ಲಬುಶೆನ್ 915 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಜೋ ರೂಟ್ 900 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 5, 7 ಸ್ಥಾನಗಳಲ್ಲಿದ್ದಾರೆ.