ಮುಂಬಯಿ: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಐಸಿಸಿ ಮುಂದಾಗಿದೆ.
ತಿಂಗಳ ವಿಳಂಬದ ನಂತರ, ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಂತಿಮವಾಗಿ ಸ್ಥಳಗಳನ್ನು ಅಧಿಕೃತವಾಗಿ ಘೋಷಿಸಿದೆ. ಪುರುಷರ ಚಾಂಪಿಯನ್ಸ್ ಟ್ರೋಫಿ 2025 ಅನ್ನು ಪಾಕಿಸ್ತಾನ ಮತ್ತು ತಟಸ್ಥ ಸ್ಥಳದಲ್ಲಿ ಆಯೋಜಿಸಲಾಗುವುದು ಎಂದು ಐಸಿಸಿ ಹೇಳಿದೆ.
2027 ರ ಐಸಿಸಿ ಈವೆಂಟ್‌ಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಾಗುವುದು ಎಂದು ಕೂಡ ಐಸಿಸಿ ಹೇಳಿದೆ. ಅಂದರೆ, ಮುಂದಿನ ದಿನಗಳಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಟೂರ್ನಿಗಳಲ್ಲಿ ಕೂಡ ಪಾಕ್ ಭಾಗವಹಿಸುವುದಿಲ್ಲ. ಹೀಗಾಗಿ ಆಗ ಕೂಡ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಗಳು ನಡೆಯಬೇಕು ಎಂದು ಷರತ್ತು ಕೂಡ ವಿಧಿಸಲಾಗಿದೆ.








