ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾಸುರನ ಆರ್ಭಟ ಹೆಚ್ಚಾಗಿದೆ. ನಿನ್ನೆ ಒಂದೇ ದಿನದಲ್ಲಿ 196 ಪ್ರಕರಣಗಳು ಪತ್ತೆಯಾಗಿವೆ. ಹಾಗಾಗಿ ಸಿಲಿಕಾನ್ ಸಿಟಿಯ ಜನ ಆತಂಕದಲ್ಲಿದ್ದಾರೆ. ಇದೆ ಹೊತ್ತಿನಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಹೆಚ್ಚಾದ ಹಿನ್ನೆಲೆಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಐಸಿಯು ಸೇವೆಯನ್ನು ಸ್ಥಗಿತಗೊಳಿಸಿದೆ.
ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಮಾನಸಿಕ ಅಸ್ವಸ್ಥರಿಗಿರುವ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಬ್ಬ ರೋಗಿಗೆ ಸೋಂಕು ದೃಡವಾಗಿದೆ ಎನ್ನಲಾಗಿದೆ. ಹಾಗಾಗಿ ಆತನ ಸಂಪರ್ಕದಲ್ಲಿ ನಾಲ್ಕು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಜೊತೆಗೆ ಸೋಂಕಿತರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಂಕಿತನ ಸಂಪರ್ಕದಲ್ಲಿ 10ಕ್ಕೂ ಹೆಚ್ಚು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.
ಪರ್ಯಾಯವಾಗಿ ಐಸಿಯು ವಾರ್ಡ್ ನಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಶಿಫ್ಟ್ ಮಾಡಲಾಗಿದೆ. ಚಿಕಿತ್ಸೆಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳುಲಾಗುತ್ತಿದೆ.
ನ್ಯೂರೋ ಸರ್ಜರಿ ಹಾಗೂ ಸೈಕ್ಯಾಟ್ರಿಯ ತಲಾ ಒಬ್ಬ ರೋಗಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ 8 ಜನಕ್ಕೆ ಸೋಂಕು ಧೃಡವಾಗಿದೆ. ಆದ್ದರಿಂದ ಆಸ್ಪತ್ರೆಗೆ ಬರುವ ಪ್ರತಿಯೊಬ್ಬರನ್ನು ಸ್ವಾಬ್ ಟೆಸ್ಟ್ ಮಾಡಲಾಗುತ್ತಿದೆ. ಸೋಂಕು ಹರಡದಂತೆ ತಡೆಯಲು ಆಸ್ಪತ್ರೆ ಆಡಳಿತ ಮಂಡಳಿ ಹರಸಾಹಸ ಪಡುತ್ತಿದೆ. ಅದಕ್ಕೆ ಆಸ್ಪತ್ರೆಗೆ ಬರುವ ಪ್ರತಿಯೊಬ್ಬರ ಮಾಹಿತಿ ಪಡೆದು ದಾಖಲು ಮಾಡಿಕೊಳ್ಳಾಗುತ್ತಿದೆ. ರೋಗಿಗಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ವೈದ್ಯರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.