ಇಡಗುಂಜಿ ಮಹಾಗಣಪತಿ ದೇವಸ್ಥಾನವು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಇಡಗುಂಜಿ ಗ್ರಾಮದಲ್ಲಿದೆ. ಸುಮಾರು 1500 ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಪುರಾತನ ದೇವಾಲಯವು ಕರಾವಳಿ ಕರ್ನಾಟಕದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ.
‘ಇಡಗುಂಜಿ’ ಎಂಬ ಹೆಸರಿನ ಮೂಲದ ಬಗ್ಗೆ ಸ್ಥಳ ಪುರಾಣದಲ್ಲಿ ವಿವರಿಸಲಾಗಿದೆ. ‘ಇಡಾ’ ಎಂದರೆ ಎಡ, ‘ಕುಂಜು’ ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯ ಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮುನಿಗಳು ಈ ಸ್ಥಳಕ್ಕೆ ‘ಇಡಗುಂಜಿ’ ಎಂದು ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ.
ಇಡಗುಂಜಿ ದೇವಾಲಯದ ವಿನಾಯಕ ಮೂರ್ತಿಯು ನಿಂತಿರುವ ದ್ವಿಭುಜ ಭಂಗಿಯಲ್ಲಿ ಸುಮಾರು 88 ಸೆಂ.ಮೀ ಎತ್ತರ ಮತ್ತು 59 ಸೆಂ.ಮೀ ಅಗಲವನ್ನು ಹೊಂದಿದೆ. ಮೂರ್ತಿಯ ಬಲ ಕೈಯಲ್ಲಿ ಕಮಲದ ಹೂ ಮತ್ತು ಎಡ ಕೈಯಲ್ಲಿ ಮೋದಕವನ್ನು ಹಿಡಿದಿರುವುದು ವಿಶೇಷ. ಗಣಪತಿಯ ವಾಹನವಾದ ಮೂಷಿಕ (ಇಲಿ)ನನ್ನು ಇಲ್ಲಿ ಮೂರ್ತಿಯ ಪಕ್ಕದಲ್ಲಿ ನೋಡಲು ಸಿಗುವುದಿಲ್ಲ.
ಪ್ರತಿವರ್ಷ ಗಣೇಶ ಚತುರ್ಥಿಯಂದು ಲಕ್ಷಾಂತರ ಭಕ್ತರು ದೇವಾಲಯಕ್ಕೆ ಆಗಮಿಸಿ, ಮಹಾಗಣಪತಿಗೆ ಪೂಜೆ ಸಲ್ಲಿಸುತ್ತಾರೆ. ಇಡಗುಂಜಿ ಕ್ಷೇತ್ರವು ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಸ್ಥಳವೆಂದು ಪ್ರಸಿದ್ಧಿ ಪಡೆದಿದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಜ್ಯೋತಿಷ್ಯಶಾಸ್ತ್ರತಜ್ಞರು 8548998564
ದೇವಾಲಯಕ್ಕೆ ತಲುಪಲು:
ರಸ್ತೆ ಮಾರ್ಗ: ಭಟ್ಕಳದಿಂದ 32 ಕಿ.ಮೀ ಮತ್ತು ಹೊನ್ನಾವರದಿಂದ 15 ಕಿ.ಮೀ ದೂರದಲ್ಲಿ ಇದೆ. ಭಟ್ಕಳ ಮತ್ತು ಹೊನ್ನಾವರದಿಂದ ಖಾಸಗಿ ಮತ್ತು ಸರಕಾರಿ ಸಾರಿಗೆ ವ್ಯವಸ್ಥೆ ಲಭ್ಯವಿದೆ.
ರೈಲು ಮಾರ್ಗ: ಹತ್ತಿರದ ರೈಲು ನಿಲ್ದಾಣಗಳು ಹೊನ್ನಾವರ ಮತ್ತು ಮುರುಡೇಶ್ವರ (ಕೊಂಕಣ ರೈಲ್ವೆ).
ವಾಯು ಮಾರ್ಗ: ಹತ್ತಿರದ ವಿಮಾನ ನಿಲ್ದಾಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಜ್ಪೆ).
ಭಕ್ತರಿಗಾಗಿ ದೇವಾಲಯದಲ್ಲಿ ಪ್ರಸಾದ ರೂಪದಲ್ಲಿ ಆಹಾರವನ್ನು ನೀಡಲಾಗುತ್ತದೆ. ವಸತಿ ಸೌಲಭ್ಯಗಳಿಗಾಗಿ ದೇವಾಲಯದ ಆಡಳಿತ ಮಂಡಳಿಯ ಅತಿಥಿ ಗೃಹಗಳಲ್ಲಿ ಮುಂಗಡ ಕಾಯ್ದಿರಿಸುವುದು ಉತ್ತಮ. ಹೆಚ್ಚಿನ ಮಾಹಿತಿಗಾಗಿ ದೇವಾಲಯದ ಅಧಿಕೃತ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು.








