ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ ?
ಬೆಂಗಳೂರು : ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ ಎಂದು ಶಾಸಕ ಜಮೀರ್ ಖಾನ್ ಗೆ ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, 75 ವರ್ಷಗಳಿಂದಲೂ ಫ್ಲಾಗ್ ಹಾರಿಸಿಲ್ಲ, ವಿರೋಧಿಸುತ್ತಲೇ ಬಂದಿದ್ದಾರೆ. ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.
ಸಿಎಂ ಜೊತೆ ಸುಮಾರು ೨ ಗಂಟೆಗಳ ಕಾಲ ಇದರ ಬಗ್ಗೆ ಚರ್ಚೆ ನಡೆಸಿದ್ದೇನೆ. ಇವತ್ತು ಸಭೆ ನಡೆಸುವಂತೆ ಸೂಚಿಸಿದ್ರು, ಅದರಂತೆ ಸಭೆ ಮಾಡಿದ್ದೇವೆ. ಸಭೆಯಲ್ಲಿ ಗಣೇಶೋತ್ಸವ ಮಾಡೋದಾದರೇ ಹೇಗೆ ಮಾಡಬೇಕು ? ಮುಂಜಾಗ್ರತಾ ಕ್ರಮಗಳೇನು ತೆಗೆದುಕೊಳ್ಳಬೇಕು ?
ಎಲ್ಲಿ ಕೂರಿಸಬೇಕು, ಸಂಭ್ರಮಾಚರಣೆ ಬಗ್ಗೆ ಜೊತೆಗೆ ಮೆರವಣಿಗೆ ಎಲ್ಲಿಂದ ಸಾಗಬೇಕು ಪ್ರತಿಯೊಂದರ ಬಗ್ಗೆ ಇವತ್ತು ಚರ್ಚೆ ಮಾಡಿದ್ದೇವೆ. ಆಚರಣೆ ಮಾಡಬೇಕಾದರೇ ಹೇಗೆ ಮಾಡಬೇಕು ಅನ್ನೋದರ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ೧೫ಕ್ಕೆ ಕಂದಾಯ ಇಲಾಖೆಯವರಾಗಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದೀವೋ, ಅದೇ ರೀತಿ ಚಾಣಕ್ಯ ತಂತ್ರದ ಮೇಲೆ ಮಾಡಬೇಕು ಅಂತಿದ್ದೇವೆ ಎಂದು ಹೇಳಿದರು.
ಇನ್ನು ಮುಸ್ಲಿಂ ಸಂಘಟನೆಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸೋಮವಾರ ಸುಪ್ರೀಂ ಗೆ ಹೋಗುತ್ತಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಆ ಬಗ್ಗೆನೂ ನಾವು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಸರ್ಕಾರ ಮುಂದೆ ಸೂಕ್ತ ನಿರ್ಧಾರ ತೆಗದುಕೊಳ್ಳುತ್ತೆ ಎಂದು ಹೇಳಿದ್ದಾರೆ.