ಪಶ್ಚಿಮ ಬಂಗಾಳ ರಾಜಕೀಯ ಕಣ ತೀವ್ರಗೊಂಡಿರುವ ನಡುವೆ, ಡೆರೆಕ್ ಓಬ್ರಿಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀಕ್ಷ್ಣ ಸವಾಲು ಹಾಕಿದ್ದಾರೆ.
ಬಂಗಾಳದ ಎಲ್ಲಾ 294 ವಿಧಾನಸಭಾ ಕ್ಷೇತ್ರಗಳಲ್ಲಿ ನಾನೇ ಅಭ್ಯರ್ಥಿ ಎಂದು ಹೇಳಿಕೆ ನೀಡಿರುವ ಪ್ರಧಾನಿ ಮೋದಿಯನ್ನು ಟೀಕಿಸಿದ ಡೆರೆಕ್ ಓಬ್ರಿಯಾನ್, ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ, ತಮ್ಮ ಸವಾಲನ್ನು ಸ್ವೀಕರಿಸಲು ಕರೆ ನೀಡಿದ್ದಾರೆ.
ಮೇ 4ರಂದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಮತ್ತೆ ಬಂಗಾಳದಲ್ಲಿ ಗೆದ್ದರೆ, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವ ಧೈರ್ಯ ತೋರಬೇಕು ಎಂದು ಅವರು ಹೇಳಿದ್ದಾರೆ.
ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಮತ್ತು ಟಿಎಂಸಿ ನಡುವಿನ ಮಾತಿನ ಸಮರ ಮತ್ತಷ್ಟು ತೀವ್ರಗೊಳ್ಳುವ ಸೂಚನೆ ನೀಡಿದೆ.








