BSP ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬಂದ್ರೆ ಎಲ್ರಿಗೂ ಉಚಿತ ಕೊರೊನಾ ಲಸಿಕೆ : ಮಾಯಾವತಿ..!
ಉತ್ತರ ಪ್ರದೇಶ : ದೇಶಾದ್ಯಂತ ಇಲ್ಲಿ ನೋಡಿದ್ರು ಕೊರೊನಾ ಲಸಿಕೆದೇ ಮಾತಾಗಿದೆ. ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ವಿತರಿಸುವಂತೆ ಅನೇಕ ರಾಜಕೀಯ ನಾಯಕರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ರಾಜ್ಯದ ಜನರಿಗೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇತ್ತ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತದೆ ಎಂದು ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
H1ಬಿ ವೀಸಾ ವಿಚಾರವಾಗಿ ಉದ್ಯೋಗಿಗಳಿಗೆ ಆಘಾತ ನೀಡಿದ ಟ್ರಂಪ್..!
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಎಸ್ ಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಕೊರೊನಾ ಲಸಿಕೆ ನೀಡುತ್ತೇವೆಂದು ಹೇಳಿದ್ದಾರೆ. ಇದೇ ವೇಳೆ ಕೊರೊನಾ ಲಸಿಕೆ ವಿತರಣೆ ಮಾಡುವ ಕೇಂದ್ರ ಸರ್ಕಾರದ ಕಾರ್ಯಕ್ರಮವನ್ನು ಪಕ್ಷ ಸ್ವಾಗತಿಸುತ್ತದೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶದ ಜನತೆಗೆ ಉಚಿತವಾಗಿ ಲಸಿಕೆಯನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಬಾರಿ ಗವಿ ಗಂಗಾಧರೇಶ್ವರನನ್ನ ಸ್ಪರ್ಶಿಸಲಿಲ್ಲ ಸೂರ್ಯರಶ್ಮಿ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel