ಬೆಂಗಳೂರು: ಎಲ್ಲರೂ ಒಗ್ಗಟ್ಟಾದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳನ್ನೂ ನಾವೇ ಗೆಲ್ಲಬಹುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎನ್ನುವ ವಿಶ್ವಾಸವಿದೆ. ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಹೀಗಾಗಿ ವರಿಷ್ಠರಾದ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿಗೆ ಈಗ ದೊಡ್ಡ ಶಕ್ತಿ, ಉತ್ಸಾಹ ಬಂದಿದೆ. ಒಟ್ಟಾಗಿ ನಾವೆಲ್ಲ ನಡೆದರೆ ಎಲ್ಲ 28 ಕ್ಷೇತ್ರಗಳನ್ನು ವಿಜಯೇಂದ್ರನ ಸಾರಥ್ಯದಲ್ಲಿ ಗೆಲ್ಲಬಹುದು. ವಿಜಯೇಂದ್ರ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.