ಹೈಕೋರ್ಟ್ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ: ಸಿದ್ದರಾಮಯ್ಯ Saaksha Tv
ರಾಮನಗರ: ಪಾದಯಾತ್ರೆ ನಿಲ್ಲಿಸಲು ಹೈಕೋರ್ಟ್ ಆದೇಶ ನೀಡಿದರೆ ನಾವು ಪಾಲಿಸುತ್ತೇವೆ. ಹೈಕೋರ್ಟ್ ಆದೇಶದ ವಿರುದ್ಧವಾಗಿ ನಾವು ನಡೆದುಕೊಳ್ಳಲ್ಲ. ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬುಧವಾರ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನೆಲದ ಕಾನೂನಿಗೆ ನಾವು ಗೌರವ ಕೊಡುತ್ತೇವೆ. ನೆಲದ ಕಾನೂನು ಬಗ್ಗೆ ಬಿಜೆಪಿಯವರಿಗೇ ನಂಬಿಕೆ ಇಲ್ಲ. ಬಿಜೆಪಿ ಶಾಸಕರೇ ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ. ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಏಕೆ ಪ್ರಕರಣ ದಾಖಲಿಸಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷೇತ್ರದಲ್ಲೇ ಜಾತ್ರೆ ನಡೆಸಲಾಗಿದೆ ಆದರೂ ಅವರ ವಿರುದ್ಧ ಏಕೆ ಪ್ರಕರಣ ದಾಖಲಿಸಲಿಲ್ಲ. ನಿಯಮ ಪಾಲಿಸುವ ವಿಚಾರದಲ್ಲಿ ಸರ್ಕಾರ ದ್ವಂದ್ವ ನೀತಿ ವಹಿಸಿದೆ. ಬಿಜೆಪಿಯವರೇ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.
ಹೈಕೋರ್ಟ್ನಿಂದ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೆಪಿಸಿಸಿ ಲೀಗಲ್ ಸೆಲ್ ಅಧ್ಯಕ್ಷ ವಕೀಲ ಎ.ಎಸ್ ಪೊನ್ನಣ್ಣಗೆ ಕೋರ್ಟ್ ವರದಿ ಕೇಳಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಿಂದ ಕರೆ ಹೋಗಿದ್ದು, ಕೋರ್ಟ್ ಕೇಳಿರೋ ಮಾಹಿತಿ ಬಗ್ಗೆ ಚರ್ಚೆ ನಡೆಸಲು ರಾಮನಗರಕ್ಕೆ ಎ.ಎಸ್ ಪೊನ್ನಣ್ಣಗೆ ಕರೆಸಿಕೊಂಡಿದ್ದಾರೆ.