ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ. ಆದರೆ, ನಾನು ದಾಖಲೆ ಬಿಡುಗಡೆ ಮಾಡಿದರೆ ಐದಾರು ಜನ ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರ (HD Devegowda) ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗದೆ ಇರಲಾರರು. ಅವರೆಲ್ಲ ಸರ್ವನಾಶ ಆಗುತ್ತಾರೆ. ಈಗ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಹಾಗೂ ಆ ಸರ್ಕಾರಕ್ಕೆ ಅದೇ ಆಗುತ್ತದೆ ಎಂದು ಹೇಳಿದ್ದಾರೆ.
ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಪ್ರಕರಣದಲ್ಲಿ ಜೈಲಿಗೆ ಕಳುಹಿಸಲು ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದರು.
ಎಸ್ ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಮಾನ್ಯತಾ ಟೆಕ್ ಪಾರ್ಕ್ ಹತ್ತಿರ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್ ಐಆರ್ ಆಗಿದೆ. ಅವರ ವಿರುದ್ಧ ತನಿಖೆ ಮಾಡಬೇಕು ಎಂದು ಸವಾಲು ಹಾಕಿದ್ದಾರೆ.