TS Nagabharana: ಹೊರ ರಾಜ್ಯದಿಂದ ಬಂದ ಉದ್ಯೋಗಿಗಳು ಕಡ್ಡಾಯವಾಗಿ ಕನ್ನಡ ಕಲಿಯಬೇಕು

1 min read
Mangaluru Saaksha Tv

ಹೊರ ರಾಜ್ಯದಿಂದ ಬಂದ ಉದ್ಯೋಗಿಗಳು ಕಡ್ಡಾಯವಾಗಿ ಕನ್ನಡ ಕಲಿಯಬೇಕು

ಮಂಗಳೂರು :  ಹೊರ ರಾಜ್ಯದಿಂದ ಬಂದ ಉದ್ಯೋಗಿಗಳು ಕಡ್ಡಾಯವಾಗಿ ಕನ್ನಡ ಕಲಿಯಬೇಕು. ಅದಕ್ಕೆ ಬೇಕಾದ ಅನುಕೂಲವಾಗಗುವಂತಹ ತರಬೇತಿಗಳನ್ನು ಆಯೋಜಿಸಬೇಕು ಎಂದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಅವರು ಹೇಳಿದ್ದಾರೆ.

ಮಗಂಗಳೂರಿನ ಬ್ಯಾಂಕ್ ಆಫ್ ಬರೋಡಾದ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರಿತು ಹಮ್ಮಿಕೊಳ್ಳಲಾದ ಸಭೆಯಲ್ಲಿ ಮಾತನಾಡಿದ ಅವರು ಒಂದು ವೇಳೆ ಅವರು ಕನ್ನಡವನ್ನು ಕಲಿಯದೇ, ಕನ್ನಡವನ್ನು ಬಳಸದೇ ಹೋದಲ್ಲಿ ಅಂತಹ ಉದ್ಯೋಗಿಗಳ ವಿರುದ್ದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಅಲ್ಲದೇ ಬ್ಯಾಂಕ್​ಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಬೇಕು. ಅರ್ಜಿ, ಚಲನ್, ನಾಮ ಫಲಕಗಳು, ಜಾಹೀರಾತುಗಳು, ನಮೂನೆ, ಚೆಕ್, ರಸೀದಿ ಸೇರಿದಂತೆ ಇತ್ಯಾದಿಗಳು ಕನ್ನಡದಲ್ಲೇ ಮುದ್ರಿತಗೊಂಡು ಗ್ರಾಹಕರ ಕೈಸೇರಬೇಕು. ಹಿಂದಿ-ಇಂಗ್ಲಿಷ್ ಭಾಷೆಗೆ ನೀಡುವ ಸ್ಥಾನಮಾನ ಕನ್ನಡ ಭಾಷೆಗೂ ದೊರಕಬೇಕು ಎಂದು ಸೂಚಿಸಿದ್ದಾರೆ.

ರೈತರಿಗೆ ಮತ್ತು ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಅರ್ಥವಾಗಲು ಬ್ಯಾಂಕ್​ನ ಅಧಿಕೃತ ವೆಬ್‍ಸೈಟ್ ಹಾಗೂ ಮೊಬೈಲ್ ಬ್ಯಾಂಕಿಂಗ್​ನಲ್ಲಿ ಕನ್ನಡ ಭಾಷೆಯನ್ನು ಅನುಷ್ಠಾನಕ್ಕೆ ತರಬೇಕು. ಬ್ಯಾಂಕ್​ಗಳಲ್ಲಿರುವ ಕನ್ನಡ ಘಟಕಗಳಲ್ಲಿ ಕನ್ನಡ ಭಾಷೆಗೆ ಸಂಬಂಧಿಸಿದ ಎಲ್ಲಾ ಆಚರಣೆಗಳನ್ನು ನಡೆಸಬೇಕು ಹಾಗೂ ಬ್ಯಾಂಕ್​ಗಳ ಮಾಸಪತ್ರಿಕೆಗಳಲ್ಲಿಯೂ ಕನ್ನಡ ಭಾಷೆಯ ಲೇಖನಗಳಿರಬೇಕು ಎಂದು ಹೇಳಿದರು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd