ಐಪಿಎಲ್ ನಲ್ಲಿ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮಳೆ ಅಡ್ಡಿಯಾಗುವ ಮುನ್ಸೂಚನೆ ಇದ್ದು, ಲೆಕ್ಕಾಚಾರಗಳು ಆರಂಭವಾಗಿವೆ.
ಮೇ 18 ರಂದು ಬೆಂಗಳೂರಿನಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇಂದು ಮಧ್ಯಾಹ್ನ ಮಳೆಯಾಗಿ, ಸಂಜೆ, ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಶೇ.100 ರಷ್ಟು ಮೋಡ ಆವರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಸಂಭವನೀಯತೆಯು ಶೇಕಡಾ 47 ರಷ್ಟಿರಲಿದೆ ಎಂದು ತಿಳಿಸಿದೆ. ಅಲ್ಲದೆ ರಾತ್ರಿ ವೇಳೆಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಕೂಡ ಶೇ. 60ಕ್ಕಿಂತ ಹೆಚ್ಚಿದೆ. ಹೀಗಾಗಿ ಮಳೆಯು ಪಂದ್ಯಕ್ಕೆ ಅಡ್ಡಿ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಹೀಗಾಗಿ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ಸೂಪರ್ ಕಿಂಗ್ಸ್ ಗೆ ಹಾದಿ ಸುಗಮವಾಗಲಿದೆ. ಸಿಎಸ್ಕೆ ತಂಡವು ಒಟ್ಟು 14 ಅಂಕಗಳೊಂದಿಗೆ ಪ್ರಸ್ತುತ ಅಂಕ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಮಳೆಯಿಂದಾಗಿ ಪಂದ್ಯ ರದ್ದಾದರೆ ಆರ್ಸಿಬಿ ಮತ್ತು ಸಿಎಸ್ಕೆ ತಲಾ ಒಂದೊಂದು ಪಾಯಿಂಟ್ ಹಂಚಿಕೊಳ್ಳಲಿವೆ. ಆಗ ಚೆನ್ನೈ ಪಾಯಿಂಟ್ಸ್ 15 ಆಗಲಿದ್ದು, ಇದೇ ವೇಳೆ ಆರ್ಸಿಬಿ ತಂಡದ ಅಂಕ 13 ರಲ್ಲೇ ಉಳಿಯಲಿದೆ. 15 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ 3ನೇ ಅಥವಾ 4ನೇ ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಬಹುದು. ಹೀಗಾಗಿ ಮಳೆಯಾಗದಿರಲಿ ಎಂದು ಅಭಿಮಾನಿಗಳು ವರುಣನನ್ನು ಪ್ರಾರ್ಥಿಸುತ್ತಿದ್ದಾರೆ.