ಬೆಳಗಾವಿ : ಲಕ್ಷ್ಮಣ ಸವದಿಗೆ ಅದೃಷ್ಟ ಇದ್ದರೆ ಮುಖ್ಯಮಂತ್ರಿ ಆಗಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಮುಖ್ಯಮಂತ್ರಿ ಬದಲಾಗಿ ಲಕ್ಷ್ಮಣ ಸವದಿ ಅವರು ಮುಂದಿನ ಸಿಎಂ ಆಗಲಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ರಮೇಶ್ ಜಾರಿಕಿಹೊಳಿ, ಲಕ್ಷ್ಮಣ ಸವದಿಗೆ ಅದೃಷ್ಟ ಇದ್ದರೆ ಮುಖ್ಯಮಂತ್ರಿ ಆಗಲಿ ಬಿಡಿ ಎಂದರು.
ಇನ್ನು ಇದೇ ವೇಳೆ ನಿಗಮ ಮಂಡಳಿ ಅಧ್ಯಕ್ಷರ ನೇಮಕ, ಇದಾದ ಬಳಿಕ ಎದ್ದಿರುವ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾಹುಕಾರ್, ನಿಗಮ ಮಂಡಳಿ ಅಧ್ಯಕ್ಷರ ನೇಮಕದ ಬಗ್ಗೆ ಹೈಕಮಾಂಡ್ ಹಾಗೂ ಸಿಎಂ ತೀರ್ಮಾನ ತೆಗೆದುಕೊಂಡಿದ್ದಾರೆ. ರಾಷ್ಟ್ರೀಯ ಪಕ್ಷದಲ್ಲಿ ಸಣ್ಣಪುಟ್ಟ ಅಸಮಾಧಾನ ಸಹಜ, ನಮ್ಮ ನಾಯಕರು ಇದನ್ನು ಬಗೆಹರಿಸುತ್ತಾರೆ ಎಂದು ಹೇಳಿದರು.








