ಬೆಂಗಳೂರು: ಗುತ್ತಿಗೆದಾರ ಸಚಿನ್ ಬರೆದಿದ್ದ ಡೆತ್ ನೋಟ್‍ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೆಸರಿದೆ. ಪ್ರಿಯಾಂಕ್ ಖರ್ಗೆಗೆ ಮಾನ, ಮರ್ಯಾದೆ ಇದ್ದರೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿನ್ ಡೆತ್‍ನೋಟ್‍ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರೂ ಇದೆ. ಅ ಈಶ್ವರಪ್ಪ ವಿಚಾರದಲ್ಲಿ ಅವರು ಏನು ಮಾತಾಡಿದ್ರು? ಈಗ ಅದನ್ನು ನೆನಪಿಸಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳಾಗುತ್ತಿವೆ. ವಾಲ್ಮೀಕಿ ನಿಗಮದ ಚಂದ್ರಶೇಖರ್, ದಾವಣೆಗೆರೆಯಲ್ಲಿ ಒಬ್ಬರು ಪಿಸಿ ಹತ್ಯೆ, ರುದ್ರಣ್ಣ, ಸಚಿನ್ ಆತ್ಮಹತ್ಯೆಯಾಗಿದೆ. ವಿಪಕ್ಷವಾಗಿ ನಾವು ಸಾಕಷ್ಟು ಹೋರಾಟ ಮಾಡಿದ್ದೇವೆ. ಎಲ್ಲಾ ರೀತಿಯ ಹೋರಾಟ ಮಾಡಿದ್ದೇವೆ. ಆದರೆ, ನಮ್ಮ ಮೇಲೆ ಕೇಸ್ ಹಾಕಿ ಹೆದರಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಗುಡುಗಿದ್ದಾರೆ.
ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.4ರಂದು ನಾನು ಹಾಗೂ ವಿಜಯೇಂದ್ರ ಸೇರಿದಂತೆ ನಮ್ಮ ಪಕ್ಷದ ಎಲ್ಲ ನಾಯಕರು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್
ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗ ಅಯೋಧ್ಯೆಯ ಕಿಚ್ಚು ಹತ್ತಿಕೊಂಡಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಟೀಕೆಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅತ್ಯಂತ...








