ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರದ ತುಷ್ಟೀಕರಣವೇ ಕಾರಣ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
ವಿಜಯೇಂದ್ರ ಅವರು ಖಂಡನೆ ವ್ಯಕ್ತಪಡಿಸಿ, “ಗೋಪೂಜೆ ಮಾಡುವ ಈ ನಾಡಿನಲ್ಲಿ, ದೇಶದಲ್ಲಿ ಈ ದುರ್ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ. ಈ ದುರ್ಘಟನೆ ಸಿದ್ದರಾಮಯ್ಯನವರಿಗೆ ಮತ್ತು ಕಾಂಗ್ರೆಸ್ ಸರಕಾರಕ್ಕೆ ಒಳ್ಳೆಯದು ಮಾಡುವುದಿಲ್ಲ” ಎಂದು ಎಚ್ಚರಿಸಿದರು.
ಆರ್.ಅಶೋಕ್ ಅವರ ಟೀಕೆ:ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, “ಕಾಂಗ್ರೆಸ್ ಸರಕಾರವು ಹಿಂದೂಗಳ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಹಿಂದೂ- ಮುಸ್ಲಿಂ ಸಮುದಾಯಕ್ಕೆ ಬೇರೆ ಬೇರೆ ನೀತಿ ಅನುಸರಿಸಿ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಇದು ಗೂಂಡಾಗಿರಿ ಸರಕಾರ; ತಾಲಿಬಾನ್ ಸರಕಾರ ಇಲ್ಲಿದೆ. “ಮುಸಲ್ಮಾನರಿಗೆ ಏನಾದರೂ ಆಗಿದ್ದರೆ ಸಿದ್ದರಾಮಯ್ಯನವರು ಪಂಚೆ ಎತ್ತಿಕೊಂಡು ಬರುತ್ತಿದ್ದರು” ಎಂದು ಟೀಕಿಸಿದರು.