ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಗಟಗಲ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರು ವಾಸಿಸುವ ಕೇರಿಗಳಲ್ಲಿ ಯಾರಾದರೂ ಮೃತಪಟ್ಟರೆ, ಅಂತ್ಯಸಂಸ್ಕಾರಕ್ಕಾಗಿ ಬರುವ ಜನರೆಲ್ಲ ಮರಳುವವರೆಗೆ ಗ್ರಾಮದೊಳಗಿನ ಕಿರಾಣಿ ಅಂಗಡಿಗಳು ಮತ್ತು ಹೋಟೆಲ್‌ಗಳನ್ನೆಲ್ಲ ಬಂದ್ ಮಾಡಿಕೊಂಡು ಅಸಹಕಾರ ತೋರಿಸುವ ಅನಿಷ್ಟ ಪದ್ಧತಿ ಜಾರಿಯಲ್ಲಿದೆ.
ಜಾಗಟಗಲ್ ಗ್ರಾಮದ ದಲಿತರ ಕೇರಿಯಲ್ಲಿ ಗುರುವಾರ ವಯೋವೃದ್ಧರೊಬ್ಬರು ತೀರಿಕೊಂಡಿದ್ದರು. ಸವರ್ಣೀಯರು ಎಂದಿನಂತೆ ಅಂಗಡಿಗಳನ್ನೆಲ್ಲ ಬಂದ್ ಮಾಡಿದ್ದರು. ಈ ಬಗ್ಗೆ ಮಾಹಿತಿ ತಿಳಿದು, ಕೆಲವು ದಲಿತ ಸಂಘಟನೆಗಳ ಮುಖಂಡರು ಗಬ್ಬೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗ್ರಾಮ ಪಂಚಾಯಿತಿ ಅಧಿಕಾರಿಗಳ ಜೊತೆ ಈ ಬಗ್ಗೆ ಮಾತನಾಡಿದ್ದಾರೆ. ಇದರಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಅಧಿಕಾರಿಗಳು ‘ಗ್ರಾಮದಲ್ಲಿ ಬಂದ್ ಮಾಡಿಕೊಂಡಿರುವ ಅಂಗಡಿಗಳಲ್ಲಿ ಮತ್ತು ಹೋಟೆಲ್‌ಗಳಲ್ಲಿ ಕೂಡಲೇ ವ್ಯಾಪಾರ ಆರಂಭಿಸಬೇಕು. ಇಲ್ಲದಿದ್ದರೆ ಪರವಾನಿಗೆ ರದ್ದುಗೊಳಿಸಿ ಮುಂದೆ ವ್ಯಾಪಾರ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಜೆ.ಜಾಡಲದಿನ್ನಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ಜಾಗಟಗಲ್ ಅಂಗಡಿ, ಹೋಟೆಲ್ ಮಾಲೀಕರಿಗೆ ಅದೇ ದಿನ ನೋಟಿಸ್ ನೀಡಿದ್ದಾರೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








