ಬೆಂಗಳೂರು: ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಸರ್ಕಾರ ಹಾಗೂ ವಿರೋಧ ಪಕ್ಷಗಳು ಕೆಸರೆರಚಾಟ ನಡೆಸಿವೆ.
ಈ ಮಧ್ಯೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡೆತ್ ನೋಟ್ ನಲ್ಲಿ ಸಚಿವರ ಹೆಸರಿದೆ. ಆದರೆ ಎಫ್ಐಆರ್ ನಲ್ಲಿ ಏಕಿಲ್ಲ. ಅವರನ್ನು ಬಂಧಿಸಿದರೆ ನಿಮ್ಮ ಬಂಡವಾಳ ಹೊರ ಬರುತ್ತಾ? ಎಂದು ಪ್ರಶ್ನಿಸಿದ್ದಾರೆ.
ಹಣ ಗುಳುಂ ಮಾಡಿದ್ದ ಅಧಿಕಾರಿಗಳನ್ನು ಏಕೆ ಬಂಧಿಸಿಲ್ಲ? ನಾನು ವರ್ಗಾವಣೆಯಲ್ಲಿ ದುಡ್ಡು ಹೊಡೆದಿಲ್ಲ ಅಂದಿದ್ದರು ಸಿಎಂ, ದುಡ್ಡು ಹೊಡೆದ್ರೆ ರಾಜೀನಾಮೆ ಕೊಡ್ತೀನಿ ಅಂದಿದ್ರು. ಈಗ ಯಾವಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಪರಿಶಿಷ್ಟ ವರ್ಗದ 187 ಕೋಟಿ ರೂ. ಹಣ ಗುಳುಂ ಆಗಿದೆ. ಇದೇ ಈ ಸರ್ಕಾರದ ಸಾಧನೆ ಎಂದು R.ಅಶೋಕ್ ವ್ಯಂಗ್ಯವಾಡಿದ್ದಾರೆ. ಇಷ್ಟೊಂದು ಕ್ಲಿಯರ್ ಆಗಿ ಡೆತ್ ನೋಟ್ ಬರೆದಿರುವ ಅಧಿಕಾರಿಯನ್ನು ನಾನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ಅವರು ಕಂಪ್ಲೀಟ್ ಡೀಟೈಲ್ಸ್ ಬರೆದಿದ್ದಾರೆ. ಲೂಟಿ ಮಾಡಿರುವುದು ಕಂಡು ಬಂದಿದೆ ಎಂದು ಆರೋಪಿಸಿದ್ದಾರೆ.