ಬೆಂಗಳೂರು: ಹೆತ್ತವರನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.
ಮುಪ್ಪಿನ ಕಾಲದಲ್ಲಿ ಹೆತ್ತವರನ್ನು ವೃದ್ಧಾಶ್ರಮಕ್ಕೆ ಸೇರಿಸುವುದು ಹೆಚ್ಚಾಗುತ್ತಿದ್ದು, ಅಂತಹ ಮಕ್ಕಳಿಗೆ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ (B Dayanand) ಅವರ ಸೂಚನೆ ಮೇರೆಗೆ ಬೆಂಗಳೂರು (Bengaluru) ಪೊಲೀಸರು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
ಹೀಗಾಗಿ ಪೊಲೀಸ್ ಇಲಾಖೆ ನಗರದ ವೃದ್ಧಾಶ್ರಮಗಳ ಮೇಲೆ ಕಣ್ಣಿಟ್ಟಿದೆ. ತಂದೆ ತಾಯಿಯನ್ನ ಸರಿಯಾಗಿ ನೋಡಿಕೊಳ್ಳದ ಮಕ್ಕಳ ಮೇಲೆ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಕೇಸ್ ಬುಕ್ ಮಾಡುವಂತೆ ಪೊಲೀಸ್ ಕಮೀಷನರ್ ಬಿ. ದಯಾನಂದ್ ಸೂಚಿಸಿದ್ದಾರೆ.








