ಮಹಿಳೆಯೊಬ್ಬರು ಕ್ಯಾನ್ಸರ್ ನೊಂದಿಗೆ ಸಾವು – ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರೆ, ಬಾಸ್ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಕಂಪೆನಿ 4ನೇ ಹಂತದ ಕ್ಯಾನ್ಸರ್ ವಿರುದ್ಧ ಜೀವನ್ಮರಣ ಹೋರಾಟ ನಡೆಸುತ್ತಿರುವ ಮಹಿಳೆಯನ್ನು ಕೆಲಸಕ್ಕೆ ಬರುವಂತೆ ಇಮೇಲ್ ಮೂಲಕ ಸಂದೇಶ ಕಳುಹಿಸಿದೆ. ಮಹಿಳೆಯು ಐರ್ಲೆಂಡ್ ನ ಅಂಗಡಿಯೊಂದರಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ, ಕಳೆದ ಕೆಲವು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಯಿ ಕ್ಯಾನ್ಸರ್ ನಿಂದ ಬಳಲುತ್ತಿರುವ ಸುದ್ದಿ ಗೊತ್ತಿದ್ದರೂ ಕೆಲಸಕ್ಕೆ ಬರುವಂತೆ ಒತ್ತಡ ಹೇರುತ್ತಿರುವ ವಿಷಯವನ್ನು ಮಗಳು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ 50 ವರ್ಷದ ತಾಯಿ ಕಳೆದ 18 ತಿಂಗಳುಗಳಿಂದ 4ನೇ ಹಂತದ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಕೆಲಸದ ಬಾಸ್ ಗೆ ಅಮ್ಮನ ಸ್ಥಿತಿ ಗೊತ್ತಿದೆ. ಆದರೂ ತಾಯಿಯನ್ನು ಆಫೀಸಿಗೆ ಬರುವಂತೆ ಆರ್ಡರ್ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾಳೆ.