ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ: ಕೆ. ಎಸ್. ಈಶ್ವರಪ್ಪ Saaksha Tv
ಮೈಸೂರು: ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ ಎಂದು ಶಾಸಕಿ ಖನೀಜಾ ಫಾತಿಮಾಗೆ ಸಚಿವ ಕೆ.ಎಸ್ ಈಶ್ವರಪ್ಪ ತಿರಿಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಜಾಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ. ನಾವು ಶಾಲೆಗೆ ಮಾತ್ರ ಹಿಜಾಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು ಎಂದು ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು ಶಾಸಕಿ ಹೇಳಿಕೆ ವಿಚಾರವಾಗಿ ಸಚಿವರು ಪ್ರತಿಕ್ರಿಯಿಸಿದರು.
ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು ಈಗ ಅಲ್ಲಿಂದಲೇ ಹಿಜಾಬ್ ವಿವಾದ ಸೃಷ್ಟಿಯಾಗಿದೆ. ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರು ಮನಸ್ಸು ಮಾಡಿದರೆ ಸಮಸ್ಯೆ ಬಗೆರಹರಿಸಬಹುದಿತ್ತು. ಆ ಆರು ಜನ ವಿದ್ಯಾರ್ಥಿನಿಯರಿಗೆ ತಿಳುವಳಿಕೆ ನೀಡಬಹುದಿತ್ತು. ಆದರೆ ಕಾಂಗ್ರೆಸ್ಗೆ ಮುಸ್ಲಿಂ ಮತಗಳೇ ಮುಖ್ಯವಾದವು. ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಮಾತನಾಡಿದರು.