ಮಂಡ್ಯ: ಬಿಜೆಪಿಗೆ ಬೆಂಬಲ ಘೋಷಿಸುವ ಮೂಲಕ ಸಂಸದೆ ಸುಮಲತಾ ಅವರು ಗೊಂದಲಗಳಿಗೆ ತೆರೆ ಎಳೆದಿದ್ದು, ಕುಮಾರಸ್ವಾಮಿ ಈ ಕುರಿತು ಮಾತನಾಡಿದ್ದಾರೆ.
ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿರುವ ಸುಮಲತಾ ಅವರು, ಮೈತ್ರಿ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿಗೆ ಬೆಂಬಲ ನೀಡುವುದಾಗಿ ಹೇಳಿಲ್ಲ. ಆದರೆ ಇತ್ತ ಕುಮಾರಸ್ವಾಮಿ ಮಾತ್ರ ಸುಮಲತಾ ಬಿಜೆಪಿ ಸೇರ್ಪಡೆ ನಿರ್ಧಾರ ನನಗೂ ಬೆಂಬಲ ನೀಡಿದಂತೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾರ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ್ದರಿಂದ ನನಗೆ ಬೆಂಬಲ ನೀಡಿದಂತೆ ಮುಂದೆ ಪ್ರಚಾರಕ್ಕೂ ಕರೆಯುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ಜತೆ ಸುಮಲತಾ ಅಂಬರೀಶ್ಗೆ ಮೊದಲಿನಿಂದ ಒಳ್ಳೆಯ ಬಾಂಧವ್ಯವಿದೆ. ಮೋದಿ ಮತ್ತೆ ಪ್ರಧಾನಿ ಆಗಬೇಕೆಂದು ಈ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.