ಬಿಪಿಎಲ್ ಕಾರ್ಡ್ ಗಳನ್ನು ಉಳ್ಳವರು ಕೂಡ ಪಡೆದುಕೊಂಡಿರುವ ಆರೋಪ ಕೇಳಿ ಬಂದಿದೆ. ಸುಳ್ಳು ಮಾಹಿತಿ ನೀಡಿ ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸುವಂತೆ ಆಹಾರ ಲಾಖೆಯಿಂದ ಅನೇಕ ಬಾರಿ ಸೂಚನೆ ನೀಡಲಾಗಿದೆ. ಸ್ಯ ಸಮೀಕ್ಷೆ ನಡೆಸಿ ಅಂದಾಜು 10 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಲು ಆಹಾರ ಇಲಾಖೆ ನಿರ್ಧರಿಸಿದೆ.
ಇಲಾಖೆಯು 6 ಮಾನದಂಡದ ಆಧಾರದ ಮೇಲೆ ಸಮೀಕ್ಷೆ ಕಾರ್ಯ ನಡೆಸಿದ್ದು, ಇದರ ವ್ಯಾಪ್ತಿಗೆ ಬಂದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಕಾರ್ಡ್ ಗಳು ರದ್ದಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸರ್ಕಾರಿ ನೌಕರರು ವಾರ್ಷಿಕ ಆದಾಯ 1 ಲಕ್ಷ 25 ಸಾವಿರ ಇರುವವರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣ ಭೂಮಿ ಹೊಂದಿರುವವರು, ವೈಟ್ ಬೋರ್ಡ್ ಕಾರು ಹೊಂದಿರುವವರು, ಸರ್ಕಾರಕ್ಕೆ ತೆರಿಗೆ ಪಾವತಿ ಮಾಡುತ್ತಿರುವವರು ಬಿಪಿಎಲ್ ಕಾರ್ಡ್ ರದ್ದು ಮಾಡಲು ನಿರ್ಧರಿಸಲಾಗಿದೆ.